ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾರ್ಚ್ ತಿಂಗಳ ಆರಂಭದಲ್ಲೇ ತೈಲ ಕಂಪನಿಗಳು ಗ್ರಾಹಕರಿಗೆ ಬಿಗ್ ಶಾಕ್ ನೀಡಿದ್ದು, ಮತ್ತೆ ಎಲ್‌ಪಿಜಿ ಸಿಲಿಂಡರ್ ದರ ಏರಿಕೆಯಾಗಿದೆ.
ಇಂದು ಮಧ್ಯರಾತ್ರಿಯಿಂದಲೇ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 25 ರೂಪಾಯಿ ಹೆಚ್ಚಳವಾಗಲಿದೆ. ಎರಡು ತಿಂಗಳಿನಿಂದ 19 ಕೆಜಿ ಸಿಕಿಂಡರ್ ಬೆಲೆ ಏರಿಕೆ ಆಗುತ್ತಲೇ ಇದೆ.
ಬಜೆಟ್ ದಿನದಂದು 14 ರೂಪಾಯಿ ಏರಿಕೆ ಮಾಡಲಾಗಿದ್ದು, ಇದೀಗ ಮತ್ತೆ 25ರೂಪಾಯಿ ಏರಿಕೆ ಮಾಡಲಾಗಿದೆ. ಇನ್ನು ಗೃಹಬಳಕೆಯ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಇಲ್ಲ.