ಗ್ರಾಹಕರಿಗೆ ಬಿಗ್‌ ಶಾಕ್‌, ಮತ್ತೆ ಈರುಳ್ಳಿ ರೇಟ್‌ ಹೆಚ್ಚಳ, ಉತ್ಫಾದನೆಯಲ್ಲಿ ಭಾರೀ ಕುಸಿತ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಧ್ಯಮ ವರ್ಗದ ಜನರ ಜೀವನ ಹೈರಾಣಾಗಿದೆ, ದಿನಬಳಕೆಯ ಎಲ್ಲ ವಸ್ತುಗಳ ಬೆಲೆ ಹೆಚ್ಚಾಗುತ್ತಿದೆ, ಸಂಬಳವೊಂದು ಬಿಟ್ಟು ಇನ್ನೆಲ್ಲದರ ಬೆಲೆಯೂ ಏರಿಕೆಯಾಗುತ್ತಿದ್ದು, ಇದೀಗ ಕಣ್ಣಲ್ಲಿ ನೀರು ತರಿಸುವ ಸರದಿ ಈರುಳ್ಳಿಯದ್ದಾಗಿದೆ.

ಸದ್ಯ ಕರ್ನಾಟಕದ ಹಲವೆಡೆ ಅತಿಯಾದ ಮಳೆಯ ಕಾರಣ ಬೆಳೆ ನೀರು‌ಪಾಲಾಗುತ್ತಿದ್ದರೆ, ಮತ್ತೊಂದೆಡೆ ಈರುಳ್ಳಿ ಮಳೆಯಿಂದಾಗಿ ಇಟ್ಟಲ್ಲೇ ಕೊಳೆತು ಹೋಗುತ್ತಿದೆ. ಹೀಗಾಗಿ ಹಬ್ಬದ ವಾರದಲ್ಲಿ 50 ರೂ. ಇದ್ದ ಈರುಳ್ಳಿಯ ಬೆಲೆ ಇದೀಗ 60 ರಿಂದ 70 ರೂಪಾಯಿ ಆಗಿದೆ.

ರಾಜ್ಯದಲ್ಲಿ ಹೆಚ್ಚು ಮಳೆಯಾಗುತ್ತಿರುವ ಪರಿಣಾಮ ಈರುಳ್ಳಿಯ ಉತ್ಪಾದನೆಯಲ್ಲಿ ಭಾರಿ ಕುಸಿತವಾಗಿದೆ. ಹೀಗಾಗಿ ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬರುತ್ತಿಲ್ಲ.‌ ಪರಿಣಾಮವಾಗಿ ಪೂರೈಕೆ ಕೂಡ ಕಡಿಮೆಯಾಗಿದೆ. ಸದ್ಯ ರಾಜ್ಯಕ್ಕೆ ಪುಣೆ, ಮಹಾರಾಷ್ಟ್ರದಿಂದ ಈರುಳ್ಳಿ ತರುಹಿಸಿಕೊಳ್ಳಲಾಗುತ್ತಿದೆ.

ದಸರಾ ವೇಳೆಗೆ ಈರುಳ್ಳಿಯ ಬೆಲೆ ಮತ್ತಷ್ಟು ದುಬಾರಿಯಾಗುವ ಸಾಧ್ಯತೆ ಇದೆ. ಈ ಹಿಂದೆ ಉತ್ತರ ಕರ್ನಾಟಕ ಭಾಗದಿಂದ ಈರುಳ್ಳಿ ರಾಜ್ಯಕ್ಕೆ ಪೂರೈಕೆಯಾಗುತ್ತಿತ್ತು. ಆದರೆ, ಈಗ ಉತ್ತರ ಕರ್ನಾಟಕದಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಮಳೆಗೆ ಈರುಳ್ಳಿ ಕೊಳೆತು ಹೋಗುತ್ತಿದೆ. ಹೀಗಾಗಿ ಈರುಳ್ಳಿ ಪೂರೈಕೆ ಕಡಿಮೆಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!