ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ದರ್ಶನ್ & ಗ್ಯಾಂಗ್ ಗೆ ಬಿಗ್ ಶಾಕ್ ಎದುರಾಗಿದ್ದು, ಸುಪ್ರೀಂಕೋರ್ಟ್ ನಲ್ಲಿ ಪೊಲೀಸರ ಮೇಲ್ಮನವಿ ವಿಚಾರಣೆಗೆ ದಿನಾಂಕ ಫಿಕ್ಸ್ ಆಗಿದೆ.
ನಟ ದರ್ಶನ್ ಹಾಗೂ ಏಳು ಮಂದಿ ಆರೋಪಿಗಳ ವಿಚಾರಣೆ ಜ.24ರಂದು ಸುಪ್ರೀಂ ಕೋರ್ಟ್ ನಲ್ಲಿ ನಡೆಯಲಿದ್ದು, ಜಾಮೀನು ನೀಡಿರುವ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಪೊಲೀಸರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ವಿಚಾರಣೆಯನ್ನು ಜನವರಿ 24ಕ್ಕೆ ನಿಗದಿಪಡಿಸಲಾಗಿದೆ.
ಚಿತ್ರದುರ್ಗ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ರದ್ದುಗೊಳಿಸುವಂತೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ದರ್ಶನ್ ಸೇರಿದಂತೆ ಏಳು ಮಂದಿಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನು ರದ್ದುಗೊಳಿಸುವಂತೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ.