April 25, 2026
Saturday, April 25, 2026
spot_img

IPL ಆರಂಭಕ್ಕೂ ಮುನ್ನವೇ ‘ಧೋನಿ’ ಅಭಿಮಾನಿಗಳಿಗೆ ಬಿಗ್ ಶಾಕ್! ಬದಲಾಗಲಿದೆಯೇ ಚೆನ್ನೈ ತಂತ್ರ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂಡಿಯನ್ ಪ್ರೀಮಿಯರ್ ಲೀಗ್ ಹಬ್ಬಕ್ಕೆ ಕೌಂಟ್‌ಡೌನ್ ಶುರುವಾಗಿದೆ. ಆದರೆ, ಟೂರ್ನಿ ಆರಂಭಕ್ಕೂ ಮುನ್ನವೇ ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಭಾರಿ ಹಿನ್ನಡೆಯಾಗಿದೆ. ತಂಡದ ಆಧಾರಸ್ತಂಭ, ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಸ್ನಾಯು ಸೆಳೆತದ ಸಮಸ್ಯೆಯಿಂದಾಗಿ ಆರಂಭಿಕ ಪಂದ್ಯಗಳಿಂದ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ.

ವರದಿಗಳ ಪ್ರಕಾರ, ಧೋನಿ ಅವರಿಗೆ ಕನಿಷ್ಠ ಎರಡು ವಾರಗಳ ಕಾಲ ವಿಶ್ರಾಂತಿಯ ಅಗತ್ಯವಿದೆ. ಹೀಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ರಾಜಸ್ಥಾನ್ ರಾಯಲ್ಸ್, ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಹೈವೋಲ್ಟೇಜ್ ಪಂದ್ಯಗಳಲ್ಲಿ ಧೋನಿ ಮೈದಾನಕ್ಕಿಳಿಯುವುದಿಲ್ಲ. ಏಪ್ರಿಲ್ 15ರವರೆಗೆ ಧೋನಿ ವಿಶ್ರಾಂತಿ ಪಡೆಯಲಿದ್ದು, ಸಂಪೂರ್ಣ ಫಿಟ್ ಆದರೆ ಏಪ್ರಿಲ್ 19 ರಂದು ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕೆ ಮರಳುವ ಸಾಧ್ಯತೆಯಿದೆ.

ಧೋನಿ ಅನುಪಸ್ಥಿತಿಯಲ್ಲಿ ವಿಕೆಟ್ ಕೀಪಿಂಗ್ ಹೊಣೆ ಯಾರಿಗೆ ಎಂಬ ಕುತೂಹಲಕ್ಕೆ ಈಗ ತೆರೆ ಬಿದ್ದಿದೆ. ತಂಡದ ಸಂಜು ಸ್ಯಾಮ್ಸನ್ ಅವರು ಧೋನಿ ಅವರ ಸ್ಥಾನದಲ್ಲಿ ವಿಕೆಟ್ ಕೀಪಿಂಗ್ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಕಳೆದ ಎರಡು ದಿನಗಳಿಂದ ಸಂಜು ಕಠಿಣ ಅಭ್ಯಾಸದಲ್ಲಿ ತೊಡಗಿದ್ದು, ತಂಡದ ಬ್ಯಾಟಿಂಗ್ ಲೈನಪ್‌ನಲ್ಲಿ ಸರ್ಫರಾಝ್ ಖಾನ್ ಅವರಿಗೆ ಸ್ಥಾನ ಸಿಗುವ ಸಾಧ್ಯತೆ ಹೆಚ್ಚಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !