ಗುಜರಾತ್ ಟೈಟಾನ್ಸ್‌ ಗೆ ಬಿಗ್ ಶಾಕ್: ಆಟಗಾರ ರಾಬಿನ್ ಮಿನ್ಜು ಗೆ ಅಪಘಾತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂಡಿಯನ್‌ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಇದರ ಬೆನ್ನಲ್ಲೇ ಗುಜರಾತ್ ಟೈಟಾನ್ಸ್ ತಂಡಕ್ಕೆದೊಡ್ಡ ಹೊಡೆತ ಬಿದ್ದಿದೆ.

ಈಗಾಗಲೇ ಹಾರ್ದಿಕ್ ಪಾಂಡ್ಯ ಗುಜರಾತ್ ಟೈಟಾನ್ಸ್ ತಂಡವನ್ನು ತೊರೆದು ಮುಂಬೈ ಇಂಡಿಯನ್ಸ್ ತಂಡವನ್ನು ಕೂಡಿಕೊಂಡಿದ್ದರು. ಇದರ ಬೆನ್ನಲ್ಲೇ ತಂಡದ ಪ್ರಮುಖ ವೇಗಿ ಮೊಹಮ್ಮದ್ ಶಮಿ ಗಾಯದ ಸಮಸ್ಯೆಯಿಂದ ಸಂಪೂರ್ಣ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಈ ಶಾಕ್‌ನಿಂದ ಹೊರಬರುವ ಮುನ್ನವೇ ಗುಜರಾತ್‌ಗೆ ಮತ್ತೊಂದು ಶಾಕ್‌ ಎದುರಾಗಿದ್ದು, ಪ್ರತಿಭಾನ್ವಿತ ಕ್ರಿಕೆಟಿಗ ರಾಬಿನ್ ಮಿನ್ಜು ಗಂಭೀರವಾಗಿ ಗಾಯಗೊಂಡಿದ್ದಾರೆ.

21 ವರ್ಷದ ಬುಡಕಟ್ಟು ಜನಾಂಗದ ರಾಬಿನ್ ಮಿನ್ಜು ಅವರನ್ನು ಕಳೆದ ಐಪಿಎಲ್ ಆಟಗಾರರ ಹರಾಜಿನಲ್ಲಿ ಬರೋಬ್ಬರಿ 3.60 ಕೋಟಿ ರೂಪಾಯಿ ನೀಡಿ ತನ್ನ ತೆಕ್ಕೆಗೆ ಸೆಳೆದುಕೊಂಡಿತ್ತು. ಇದೀಗ ರಾಬಿನ್ ಮಿನ್ಜ್ ಸೂಪರ್ ಬೈಕ್ ಚಲಾಯಿಸುವಾಗ ಅಪಫಾತಕ್ಕೊಳಗಾಗಿದ್ದಾರೆ ಎಂದು ಅವರ ತಂದೆ ಖಚಿತಪಡಿಸಿದ್ದಾರೆ.

ರಾಬಿನ್ ಮಿನ್ಜು ಕವಾಸಕಿ ಸೂಪರ್ ಬೈಕ್ ಓಡಿಸುತ್ತಿದ್ದರು. ಈ ಸಂದರ್ಭ ಮತ್ತೊಂದು ಬೈಕ್‌ಗೆ ರಾಬಿನ್ ಮಿನ್ಜು ಅವರ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ. ಈ ಕುರಿತಂತೆ ಮಾತನಾಡಿರುವ ರಾಬಿನ್ ಮಿನ್ಜು ಅವರ ತಂದೆ ಫ್ರಾನ್ಸಿಸ್ ಮಿನ್ಜು, “ರಾಬಿನ್ ಮಿನ್ಜು ಅವರ ಬೈಕ್ ನಿಯಂತ್ರಣ ತಪ್ಪಿ ಮತ್ತೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಸದ್ಯದ ಮಟ್ಟಿಗೆ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಸದ್ಯ ಅವರು ವೈದ್ಯರ ನಿಗಾದಲ್ಲಿದ್ದಾರೆ” ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!