ಐಪಿಎಲ್ ಚಾಂಪಿಯನ್ ಗೆ ಬಿಗ್ ಶಾಕ್: ಮುಂಬೈ ಇಂಡಿಯನ್ಸ್‌ಗೆ ಗಾಯದ ಮೇಲೆ ಬರೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿದ್ದು, 10 ತಂಡಗಳು ಚಾಂಪಿಯನ್ ಪಟ್ಟ ಅಲಂಕರಿಸಲು ಸಾಕಷ್ಟು ಪೈಪೋಟಿ ನಡೆಸುತ್ತಿವೆ. ಹೀಗಿರುವಾಗಲೇ ಮುಂಬೈ ಇಂಡಿಯನ್ಸ್‌ ತಂಡಕ್ಕೆ ಬಿಗ್ ಶಾಕ್ ಎದುರಾಗಿದೆ.

ಮುಂಬೈ ಇಂಡಿಯನ್ಸ್ ತಂಡದ ಪ್ರೀಮಿಯರ್ ವೇಗಿ ಎನಿಸಿಕೊಂಡಿರುವ ಜಸ್ಪ್ರೀತ್ ಬುಮ್ರಾ, ಸೊಂಟನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ನ್ಯೂಜಿಲೆಂಡ್‌ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿ, ಚೇತರಿಸಿಕೊಳ್ಳುತ್ತಿದ್ದು, 16ನೇ ಆವೃತ್ತಿಯ ಐಪಿಎಲ್ ಟೂರ್ನಿಯಿಂದ ಹೊರಬಿದ್ದಿದ್ದಾರೆ.

ಈ ಆಘಾತದಿಂದ ಹೊರಬರುವ ಮುನ್ನವೇ ಮುಂಬೈ ಇಂಡಿಯನ್ಸ್‌ ತಂಡಕ್ಕೆ ಮತ್ತೊಂದು ಶಾಕ್ ಎದುರಾಗಿದ್ದು, ತಂಡದ ಮತ್ತೋರ್ವ ಮಾರಕ ವೇಗಿ, ಆಸ್ಟ್ರೇಲಿಯಾ ಮೂಲದ ಜೇ ರಿಚರ್ಡ್‌ಸನ್‌ ಕೂಡಾ ಸ್ನಾಯು ಸೆಳೆತದಿಂದ ಬಳಲುತ್ತಿದ್ದು, 16ನೇ ಆವೃತ್ತಿಯ ಐಪಿಎಲ್ ಟೂರ್ನಿಯಿಂದ ಹೊರಬಿದ್ದಿದ್ದಾರೆ.

ಸ್ನಾಯು ಸೆಳೆತದಿಂದ ಚೇತರಿಸಿಕೊಂಡ ಬಳಿಕ ಕಳೆದ ವಾರ ಕ್ಲಬ್ ಕ್ರಿಕೆಟ್ ಆಡುವ ಸಂದರ್ಭದಲ್ಲಿ 26 ವರ್ಷದ ಜೇ ರಿಚರ್ಡ್‌ಸನ್‌ಗೆ ಮತ್ತೊಮ್ಮೆ ಸ್ನಾಯು ಸೆಳೆತ ಕಾಣಿಸಿಕೊಂಡಿತ್ತು. ಹೀಗಾಗಿ ಭಾರತ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಯಿಂದಲೂ ರಿಚರ್ಡ್‌ಸನ್ ಹೊರಬಿದ್ದಿದ್ದರು.
ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ವೇಗಿ ಜೇ ರಿಚರ್ಡ್‌ಸನ್ ಅವರನ್ನು 1.50 ಕೋಟಿ ರುಪಾಯಿ ನೀಡಿ ಖರೀದಿಸಿತ್ತು. ಇದೀಗ ಜೇ ರಿಚರ್ಡ್‌ಸನ್ ಐಪಿಎಲ್‌ಗೆ ಅಲಭ್ಯರಾಗಿದ್ದಾರೆ.

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಇದೇ ಮಾರ್ಚ್ 31ರಿಂದ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡಗಳು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಕಾದಾಡಲಿವೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!