ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಎಎಸ್ ರೋಹಿಣಿ ಸಿಂಧೂರಿ ಹೇರಿದ್ದ ಮಾನಹಾನಿ ಕೇಸ್ ರದ್ದು ಕೋರಿ ಐಪಿಎಸ್ ರೂಪಾ.ಡಿ ಹೈಕೋರ್ಟ್ ಗೆಅರ್ಜಿ ಸಲ್ಲಿಸಿದ್ದು, ಇದೀಗ ಅರ್ಜಿಯನ್ನು ವಜಾಗೊಳಿಸಲಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಪೋಸ್ಟ್ ಮಾಡಿದ್ದ ಸಂಬಂಧ ಐಪಿಎಸ್ ಅಧಿಕಾರಿ ಡಿ.ರೂಪಾ ವಿರುದ್ಧ ಮಾನನಷ್ಟ ಮೊಕದ್ದಮ್ಮೆ ದಾಖಲಿಸಲಾಗಿತ್ತು.
ರೋಹಿಣಿ ಸಿಂಧೂರಿ ದಾಖಲಿಸಿದ್ದ ಮಾನನಷ್ಟ ಪ್ರಕರಣದಲ್ಲಿ ಡಿ.ರೂಪಾಗೆ ಕೋರ್ಟ್ ಸಮನ್ಸ್ ಕೂಡ ನೀಡಿತ್ತು. ಆಗ ಖುದ್ದು ನ್ಯಾಯಾಲಯಕ್ಕೆ ಹಾಜರಾಗಿದ್ದಂತ ಅವರು, ಪ್ರಕರಣದಲ್ಲಿ ಜಾಮೀನು ಪಡೆದಿದ್ದರು.
ಇಂದು ಡಿ.ರೂಪಾ ಮಾನನಷ್ಟ ಪ್ರಕರಣ ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು, ಅರ್ಜಿ ರದ್ದುಗೊಳಿಸಲು ನಕಾರ ವ್ಯಕ್ತಪಡಿಸಿ, ವಜಾಗೊಳಿಸಿದೆ. ಈ ಮೂಲಕ ಐಪಿಎಸ್ ಅಧಿಕಾರಿ ಡಿ.ರೂಪಾಗೆ ಬಿಗ್ ಶಾಕ್ ನೀಡಲಾಗಿದೆ.