ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಂಸದ ವೀರಪ್ಪ ಮೊಯ್ಲಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಮಾಜಿ ಸಂಸದ ವೀರಪ್ಪ ಮೊಯ್ಲಿ ಅವರು ಚುನಾವಣೆಗೂ ಮೊದಲು ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ.
ಕಾಂಗ್ರೆಸ್ನಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಟಿಕೆಟ್ ವಿಚಾರವಾಗಿ ಕಾಂಗ್ರೆಸ್ ಮಾಜಿ ನಾಯಕ ವೀರಪ್ಪ ಮೊಯ್ಲಿ ಹಾಗೂ ಯುವ ಕಾಂಗ್ರೆಸ್ ಮುಖಂಡ ರಕ್ಷಾ ರಾಮಯ್ಯ ನಡುವಿನ ಜಟಾಪಟಿ ತೀವ್ರಗೊಂಡಿತ್ತು.
ನನಗೆ ಟಿಕೆಟ್ ನೀಡಬೇಕೆಂದು ಕೈ ನಾಯಕರು ಮನವಿ ಮಾಡಿದ್ದರು. ಆದರೆ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಹೈಕಮಾಂಡ್ ಮನವಿ ಮಾಡಿತ್ತು, ಹೈಕಮಾಂಡ್ ಮಾತಿಗೆ ಗೌರವ ಕೊಟ್ಟು ನಾನು ಸ್ಪರ್ಧೆಯಿಂದ ಹಿಂದೆ ಸರಿದಿದ್ದೇನೆ, ರಕ್ಷಾ ರಾಮಯ್ಯಗೆ ಅವರಿಗೆ ಬೆಂಬಲ ನೀಡುತ್ತೇನೆ. ನನ್ನ ಬೆಂಬಲಿಗರು ರತ್ನಾ ರಾಮಯ್ಯಗೆ ಅವರಿಗೆ ಬೆಂಬಲ ನೀಡಲಿದ್ದಾರೆ ಎಂದು ಹೇಳಿದರು.