ರನ್ಯಾ ರಾವ್​ಗೆ ಬಿಗ್ ಶಾಕ್! ನಟಿಯನ್ನು 3 ದಿನ ಡಿಆರ್​ಐ ಕಸ್ಟಡಿಗೆ ನೀಡಿದ ಕೋರ್ಟ್​

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಸ್ಯಾಂಡಲ್​ವುಡ್ ನಟಿ ರನ್ಯಾ ರಾವ್ ಜಾಮೀನು ಅರ್ಜಿಯ ತೀರ್ಪನ್ನು ಸ್ಥಳೀಯ ನ್ಯಾಯಾಲಯ ಇದೀಗ ಪ್ರಕಟಿಸಿದೆ. ನಟಿಯನ್ನು ಮೂರು ದಿನಗಳ ಕಾಲ ಡಿಆರ್​ಐ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.

ನಿನ್ನೆ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಡಿಆರ್ ಐ ಅಧಿಕಾರಿಗಳು ಆರೋಪಿಯನ್ನು 3 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಕೇಳಿದ್ದರು. ಅದರಂತೆ ನ್ಯಾಯಮೂರ್ತಿ ವಿಶ್ವನಾಥ್ ಸಿ ಗೌಡರ್ ಈ ಆದೇಶ ಹೊರಡಿಸಿದ್ದಾರೆ.

ದುಬೈನಿಂದ ಮಾರ್ಚ್​ 3ರ ರಾತ್ರಿ ಎಮಿರೇಟ್ಸ್ ಏರ್‌ಲೈನ್ಸ್ ವಿಮಾನದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಟಿಯನ್ನು ತಪಾಸಣೆ ಮಾಡಿದ ವೇಳೆ ನಟಿ ಬಳಿ 14.80 ಕೆಜಿ ಚಿನ್ನ ಪತ್ತೆಯಾಗಿತ್ತು. ತಕ್ಷಣ ನಟಿಯನ್ನು ಬಂಧಿಸಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!