January17, 2026
Saturday, January 17, 2026
spot_img

ಟೀಮ್ ಇಂಡಿಯಾಗೆ ಬಿಗ್ ಶಾಕ್: ಸ್ಟಾರ್ ಆಟಗಾರ ತಂಡದಿಂದ ಔಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿ ಮುಕ್ತಾಯಗೊಂಡಿದೆ. ಮೂರು ಪಂದ್ಯಗಳ ಸರಣಿಯನ್ನು ಆಸ್ಟ್ರೇಲಿಯಾ 2-1 ಅಂತರದಿಂದ ಗೆದ್ದುಕೊಂಡಿದ್ದರೂ, ಕೊನೆಯ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಗೆಲುವು ದಾಖಲಿಸಿತ್ತು. ಆದರೆ ಈ ಸಂತೋಷದ ಮಧ್ಯೆ ಭಾರತ ತಂಡಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಪ್ರಮುಖ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ಗಾಯದ ಸಮಸ್ಯೆಯಿಂದಾಗಿ ಮುಂದಿನ ಮೂರು ವಾರಗಳ ಕಾಲ ಕ್ರಿಕೆಟ್‌ನಿಂದ ದೂರವಾಗಲಿದ್ದಾರೆ.

ಸಿಡ್ನಿಯಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಕ್ಯಾಚ್ ಹಿಡಿಯುವ ವೇಳೆ ಶ್ರೇಯಸ್ ಅಯ್ಯರ್ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರು ಮೈದಾನ ತೊರೆದಿದ್ದರು. ವೈದ್ಯಕೀಯ ತಪಾಸಣೆಯ ಬಳಿಕ ಅವರ ಎಡ ಪಕ್ಕೆಲುಬಿಗೆ ಗಂಭೀರ ಗಾಯವಾಗಿರುವುದು ದೃಢಪಟ್ಟಿದೆ. ಇದರ ಪರಿಣಾಮವಾಗಿ ಅವರು ವಿಶ್ರಾಂತಿ ಪಡೆಯಬೇಕೆಂದು ವೈದ್ಯರು ಸೂಚಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಶ್ರೇಯಸ್ ಅಯ್ಯರ್ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಟಿ20 ಸರಣಿಯಿಂದ ಹೊರಗುಳಿದಿದ್ದಾರೆ. ಆದರೆ ತಂಡದ ಮೂಲಗಳು ಅವರ ಶೀಘ್ರ ಚೇತರಿಕೆಗೆ ವಿಶ್ವಾಸ ವ್ಯಕ್ತಪಡಿಸಿದ್ದು, ಅವರು ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಟೆಸ್ಟ್ ಮತ್ತು ಏಕದಿನ ಸರಣಿಗೆ ಮುನ್ನ ಪೂರ್ಣ ಫಿಟ್‌ನೆಸ್‌ನೊಂದಿಗೆ ಮರಳುವ ನಿರೀಕ್ಷೆ ಇದೆ ಎಂದು ತಿಳಿಸಿದೆ.

ಇದೀಗ ಟೀಮ್ ಇಂಡಿಯಾ ಅಕ್ಟೋಬರ್ 29ರಿಂದ ಆರಂಭವಾಗುವ ಟಿ20 ಸರಣಿಗೆ ಸಿದ್ಧತೆ ನಡೆಸುತ್ತಿದೆ. ಈ ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ನಾಯಕತ್ವ ವಹಿಸಿಕೊಂಡಿದ್ದು, ಶುಭಮನ್ ಗಿಲ್ ಉಪನಾಯಕನಾಗಿದ್ದಾರೆ. ತಂಡದಲ್ಲಿ ರಿಂಕು ಸಿಂಗ್, ಶಿವಂ ದುಬೆ, ಅರ್ಷದೀಪ್ ಸಿಂಗ್, ಜಸ್‌ಪ್ರೀತ್ ಬುಮ್ರಾ ಮುಂತಾದ ಆಟಗಾರರಿಗೆ ಅವಕಾಶ ದೊರೆತಿದೆ.

Must Read

error: Content is protected !!