I.N.D.I.A ಮೈತ್ರಿಕೂಟಕ್ಕೆ ಬಿಗ್‌ ಶಾಕ್‌ : ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಹಾರ ರಾಜಕೀಯದಲ್ಲಿ ಮಹತ್ವದ ಬದಲಾವಣೆಯ ಗಾಳಿ ಬೀಸುತ್ತಿದ್ದು, ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಬುಧವಾರ ಪರೋಕ್ಷವಾಗಿ ಲಾಲು ಕುಟುಂಬವನ್ನು ಗುರಿಯಾಗಿಸಿಕೊಂಡಿದ್ದಾರೆ . ಆರ್‌ ಜೆಡಿ ಮತ್ತು ಜೆಡಿಯು ನಡುವಿನ ಬಿರುಕು ಹೆಚ್ಚಾಗಿದೆ. ಇದರ ಜೊತೆಗೆ

ನಿತೀಶ್ ಕುಮಾರ್ ಮತ್ತೆ ಪಕ್ಷಾಂತರ ಮಾಡಬಹುದು. ಅವರು ಮೈತ್ರಿಯನ್ನು ಮುರಿದು ಮತ್ತೆ ಬಿಜೆಪಿಗೆ ಸೇರಬಹುದು ಎಂಬ ಊಹಾಪೋಹಗಳಿವೆ.

ಮೂಲಗಳ ಪ್ರಕಾರ, ನಿತೀಶ್ ಕುಮಾರ್ ಮತ್ತೆ ಮರಳಲು ಬಿಜೆಪಿ ಹೈಕಮಾಂಡ್ ಅನುಮೋದನೆ ನೀಡಿದೆ. ನಿತೀಶ್ ಕುಮಾರ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬಹುದು ಎಂದು ಮಾಧ್ಯಮಗಳು ವರದಿ ಮಾಡುತ್ತಿದೆ.

ಈ ಮೂಲಕ ಲೋಕಸಭೆ ಚುನಾವಣೆಗೆ ಮುನ್ನ ಇಂಡಿಯಾ ಮೈತ್ರಿಕೂಟಕ್ಕೆ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ, ಅರವಿಂದ್‌ ಕೇಜ್ರಿವಾಲ್‌ ನೇತೃತ್ವದ ಎಎಪಿ ಬಳಿಕ ಇದೀಗ ನಿತಿಶ್‌ ಕುಮಾರ್‌ ಶಾಕ್‌ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!