Monday, September 25, 2023

Latest Posts

ರಾಜ್ಯದ ಬಡಜನತೆಗೆ ಬಿಗ್ ಶಾಕ್: ಇಂದಿರಾ ಕ್ಯಾಂಟೀನ್ ನಲ್ಲಿ ಊಟದ ದರ ಏರಿಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಇಂದಿರಾ ಕ್ಯಾಂಟೀನ್ ಮೂಲಕ ರಾಜ್ಯದ ಬಡವರು, ಮದ್ಯಮ ವರ್ಗದವರಿಗೆ ಊಟ, ತಿಂಡಿ ನೀಡಲಾಗುತ್ತಿದ್ದು, ಇದೀಗ ಇಂದಿರಾ ಕ್ಯಾಂಟೀನ್ ನ ಊಟದ ದರವನ್ನು ಏರಿಕೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಬಿಬಿಎಂಪಿ ವ್ಯಾಪ್ತಿಯ ಇಂದಿರಾ ಕ್ಯಾಂಟೀನ್ ಗಳಲ್ಲಿ ಹಳೇ ದರವೇ ಇರಲಿದೆ. ಆದರೆ ಸ್ಥಳೀಯ ಸಂಸ್ಥೆಗಳಲ್ಲಿನ ಇಂದಿರಾ ಕ್ಯಾಂಟೀನ್ ಗಳಲ್ಲಿನ ಊಟದ ದರ ಹೆಚ್ಚಳ ಮಾಡಲಾಗುತ್ತಿದ್ದು, ಈ ದರವನ್ನು 27 ರೂ.ಗೆ ಏರಿಕೆ ಮಾಡಲು ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ನೂತನವಾಗಿ ನಿರ್ಮಾಣವಾಗುತ್ತಿರುವಂತ ಇಂದಿರಾ ಕ್ಯಾಂಟೀನ್ ಗಳಲ್ಲಿ ಒಂದು ಊಟದ ಬೆಲೆ ಏರಿಕೆ ಮಾಡಲಾಗುತ್ತಿದೆ. ಇಂದಿರಾ ಕ್ಯಾ ಒಂದೂ ಊಟದ ಬೆಲೆ 60 ರೂ ಆಗಲಿದೆ. ಗ್ರಾಹಕರಿಂದ ರೂ.27 ಸಂಗ್ರಹಿಸಿ, ರೂ.33ರ ಸಬ್ಸೀಡಿ ನೀಡಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಬಿಬಿಎಂಪಿ ಹೊರತುಪಡಿಸಿ ಹೊಸದಾಗಿ 188 ಇಂದಿರಾ ಕ್ಯಾಂಟೀನ್ ತೆರೆಯಲು ಅನುಮತಿ ನೀಡಲಾಗಿದೆ. ಹೊಸ ಇಂದಿರಾ ಕ್ಯಾಂಟೀನ್ ಗೆ 27 ಕೋ. ರೂ. ನೀಡಲು ಅನುಮೋದನೆ ನೀಡಲಾಗಿದ್ದು, ಸ್ಥಳೀಯ ತಿಂಡಿ ತಿನಿಸು ಗಮನದಲ್ಲಿಟ್ಟುಕೊಂಡು ಇಂದಿರಾ ಕ್ಯಾಂಟೀನ್ ಮೆನು ಬದಲಾವಣೆ ಮಾಡಲಾಗುತ್ತದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!