ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾದಿಂದ 50:50 ಅನುಪಾತದಲ್ಲಿ ಸೈಟ್ ಪಡೆದವರಿಗೆ ಬಿಗ್ ಶಾಕ್ ಎದುರಾಗಿದ್ದು, ಜಪ್ತಿಗೆ ಎಲ್ಲಾ ಸದಸ್ಯರು ಒಮ್ಮತದ ಒಪ್ಪಿಗೆ ಸೂಚಿಸಿದ್ದಾರೆ.
ಇಂದು ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಕಚೇರಿಯಲ್ಲಿ ಮುಡಾ ಸದಸ್ಯರ ಸಭೆ ನಡೆಯಿತು. ಈ ಸಭೆಯಲ್ಲಿ ನ್ಯಾ.ಪಿಎನ್ ದೇಸಾಯಿ ವರದಿಯ ನಂತರ 50:50 ಅನುಪಾತದಲ್ಲಿ ಸೈಟ್ ಪಡೆದವರಿಂದ ಜಪ್ತಿ ಮಾಡುವ ನಿರ್ಧಾರಕ್ಕೆ ಮುಡಾದ ಎಲ್ಲಾ ಸದಸ್ಯರು ಒಪ್ಪಿಗೆ ಸೂಚಿಸಿದರು.
ಮುಡಾದಲ್ಲಿ 50:50 ಅನುಪಾತದಡಿ ನಿವೇಶನಗಳ ಹಂಚಿಕೆಯಲ್ಲಿ ನಡೆದಿರುವ ಬಹುಕೋಟಿ ಹಗರಣ ಬೆಳಕಿಗೆ ಬಂದನಂತರ ನಡೆಯುತ್ತಿರುವ ಮೊದಲ ಮುಡಾದ ಸಾಮಾನ್ಯ ಸಭೆ ಇದಾಗಿದೆ.