ಎಪಿಎಲ್, ಬಿಪಿಎಲ್ ಕಾರ್ಡ್ ಇಲ್ಲದವರಿಗೆ ಬಿಗ್ ಶಾಕ್: ಕೇಂದ್ರ ಸರ್ಕಾರದ ‘ಭಾರತ್ ಅಕ್ಕಿ’ ಯೋಜನೆ ಸ್ಥಗಿತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆ ಚುನಾವಣೆಗೂ ಮುನ್ನ ಆರಂಭಿಸಿರುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಭಾರತ್ ಅಕ್ಕಿ ಯೋಜನೆ ಜುಲೈನಿಂದ ಸ್ಥಗಿತಗೊಂಡಿದೆ.

ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ಇಲ್ಲದ ಜನಸಾಮಾನ್ಯರಿಗೆ ಅನುಕೂಲಕರ ಪಡಿತರ ವ್ಯವಸ್ಥೆಯಿಂದಾಗಿ ಅಮಾನತುಗೊಳಿಸಲಾಗಿದೆ. ಯೋಜನೆಯಡಿ ಪ್ರತಿ ಕೆಜಿ ಅಕ್ಕಿಗೆ 29 ರೂ. 27.50ರೂ. ಗೆ ಗೋಧಿ ಹಿಟ್ಟು, 60 ರೂಪಾಯಿಗೆ ಕಡ್ಲೆ ಬೇಳೆ ವಿತರಿಸಲಾಗುತ್ತಿತ್ತು. ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಆಹಾರವನ್ನು ವಿತರಿಸುವ ಯೋಜನೆ ಇದಾಗಿತ್ತು. ಭಾರತ್ ಅಕ್ಕಿಗೆ ಗ್ರಾಹಕರಿಂದಲೂ ಹೆಚ್ಚಿನ ಬೇಡಿಕೆ ಬಂದಿದೆ. ಆದರೆ, ಯೋಜನೆ ಹಠಾತ್ತನೆ ರದ್ದಾಗಿದೆ.

ಕೇಂದ್ರದ ಆದೇಶದಂತೆ ಸಾಮಗ್ರಿಗಳನ್ನು ಜೂ.10ರವರೆಗೆ ಸರಬರಾಜು ಮಾಡಲಾಗಿದ್ದು, ನಂತರ ಸಾಮಗ್ರಿ ಪೂರೈಕೆಯಾಗದ ಕಾರಣ ಸದ್ಯಕ್ಕೆ ವಿತರಣೆ ಸ್ಥಗಿತಗೊಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!