ಟ್ರಾವೆಲ್ಸ್ ಮಾಲೀಕರಿಗೆ ಬಿಗ್ ಶಾಕ್: ಸಾರಿಗೆ ಇಲಾಖೆಯಿಂದ 25 ಐಷಾರಾಮಿ ಕಾರುಗಳು ಸೀಜ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಲ್ಲಿ ವೈಟ್ ಬೋರ್ಡ್ ಹೊಂದಿರುವಂತಹ, ಸೆಲೆಬ್ರಿಟಿಗಳಿಗೆ ಐಷಾರಾಮಿ ಕಾರುಗಳನ್ನು ಬಾಡಿಗೆಗೆ ನೀಡುತ್ತಿದ್ದ ಟ್ರಾವೆಲ್ಸ್ ಮಾಲೀಕರಿಗೆ ಸಾರಿಗೆ ಇಲಾಖೆಯು ಬಿಗ್ ಶಾಕ್ ನೀಡಿದೆ.

ಸಾರಿಗೆ ಇಲಾಖೆ ಆ ಕಾರುಗಳನ್ನು ಸೀಜ್ ಮಾಡುವ ಮೂಲಕ ಟ್ರಾವೆಲ್ಸ್ ಮಾಲೀಕರಿಗೆ ಶಾಕ್​ ನೀಡಿದೆ.

ಬೆಂಗಳೂರಲ್ಲಿ ಇಂದು ಸಾರಿಗೆ ಇಲಾಖೆಯ ಅಧಿಕಾರಿಗಳು ಹಲವು ಕಡೆಗಳಲ್ಲಿ ದಾಳಿ ನಡೆಸಿದ್ದು, ಯಶವಂತಪುರ, ರಾಜಾಜಿ ನಗರ, ಮತ್ತಿಕೆರೆ, ಪೀಣ್ಯ, ಮಲ್ಲೇಶ್ವರಂ ಸೇರಿದಂತೆ ಅಕ್ಕಪಕ್ಕದ ಏರಿಯಾಗಳಲ್ಲಿ ಪ್ರತಿ ತಂಡದಲ್ಲೂ ಸಾರಿಗೆ ಇಲಾಖೆಯ ಇನ್ಸ್‌ಪೆಕ್ಟರ್​​​ ಒಳಗೊಂಡಂತೆ ಒಟ್ಟು 9 ತಂಡಗಳಿಂದ ಕಾರ್ಯಾಚರಣೆ ಮಾಡಲಾಗಿದೆ. ಈ ಮೂಲಕ, ಜಾಗ್ವಾರ್, ಬಿಎಂಡಬ್ಲೂ, ರೇಂಜ್ ರೋವರ್, ಸೇರಿದಂತೆ ಕೋಟ್ಯಂತರ ರೂ. ಬೆಲೆಬಾಳುವ 25 ಐಷಾರಾಮಿ ಕಾರುಗಳನ್ನು ಆರ್​ಡಿಓ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಜೊತೆಗೆ 50 ಲಕ್ಷ ರೂ. ದಂಡ ವಸೂಲಿ ಮಾಡಿದ್ದಾರೆ.

ಟ್ರಾವೆಲ್ಸ್ ಮಾಲೀಕರು ಔಡಿ, ಬಿಎಂಡಬ್ಲೂ, ಬೆನ್ಜ್, ವೋಲ್ವೋ ಸೇರಿದಂತೆ ಸಾಕಷ್ಟು ಐಷಾರಾಮಿ ವೈಟ್ ಬೋರ್ಡ್ ಕಾರುಗಳನ್ನು ಸೆಲೆಬ್ರಿಟಿಗಳಿಗೆ ಯೆಲ್ಲೋ ಬೋರ್ಡ್ ರೀತಿಯಲ್ಲಿ ಬಾಡಿಗೆಗೆ ನೀಡುತ್ತಿದ್ದಾರೆ.

ನಿಯಮದ ಪ್ರಕಾರ ವೈಟ್ ಬೋರ್ಡ್ ಕಾರು ಇರುವುದು ಸ್ವಂತ ಬಳಕೆಗೆ. ಆದರೆ, ವೈಟ್ ಬೋರ್ಡ್ ಐಷಾರಾಮಿ ಕಾರುಗಳನ್ನು ದೊಡ್ಡ ಸಿನಿಮಾ ನಟರು ಸೇರಿದಂತೆ ಸೆಲೆಬ್ರಿಟಿಗಳಿಗೆ ಬಾಡಿಗೆ ನೀಡಲು ಬಳಕೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸಾರಿಗೆ ಇಲಾಖೆಗೆ ಕೋಟ್ಯಂತರ ರೂ. ನಷ್ಟ ಉಂಟಾಗುತ್ತಿದೆ. ಹಾಗಾಗಿ ಇಂದು ಆ ಕಾರುಗಳನ್ನು ಸೀಜ್ ಮಾಡಲಾಗಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!