ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಮಾಜೀ ಅಧ್ಯಕ್ಷರೊಬ್ಬರನ್ನು ಚುನಾವಣೆಯಿಂದಲೇ ಅನರ್ಹಗೊಳಿಸಲಾಗಿದೆ.
ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಫರ್ಧಿಸಲು ಮುಂದಾಗಿದ್ದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಕೊಲೊರಾಡೊ ಕೋರ್ಟ್ ಅನರ್ಹಗೊಳಿಸಿದೆ.
ಕ್ಯಾಪಿಟಲ್ ಹಿಲ್ ದಂಗೆಯಲ್ಲಿ ಟ್ರಂಪ್‌ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆದೇಶ ಪ್ರಕಟವಾಗಿದೆ. ಜ.4ರೊಳಗೆ ಟ್ರಂಪ್ ಮೇಲ್ಮನವಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ.
ಈ ಬಗ್ಗೆ ಟ್ರಂಪ್ ವಕ್ತಾರರು ಆಕ್ರೋಶ ವ್ಯಕ್ತಪಡಿಸಿದ್ದು, ಈ ದೋಷಪೂರಿತ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಹೇಳಿದ್ದಾರೆ.