ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಸಂಸದ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆಯನ್ನು ಮುಚ್ಚುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶಿಸಿದೆ. ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಚಿಮ್ಮಾಯಿದಲಾಯಿ ಗ್ರಾಮದ ಬಳಿ ಇರುವ ಶ್ರೀ ಸಕ್ಕರೆ ಕಾರ್ಖಾನೆಯಿಂದ ಕಲುಷಿತ ನೀರನ್ನು ಮುಲ್ಲಾಮಾರಿ ಜಲಾಶಯಕ್ಕೆ ಬಿಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ.
ಮಂಡಳಿಯು ವಾಯು, ಜಲ ಕಾಯ್ದೆ ಉಲ್ಲಂಘನೆ ಆರೋಪ ಹಿನ್ನಲೆ ಬೀಗ ಜಡಿಯುವಂತೆ ಆದೇಶ ಹೊರಡಿಸಿದೆ. ಕಾರ್ಖಾನೆಯ ವಿದ್ಯುತ್ ಮತ್ತು ನೀರಿನ ಸರಬರಾಜುಗಳನ್ನು ಸ್ಥಗಿತಗೊಳಿಸಲು ಆದೇಶಿಸಲಾಯಿತು. ಈ ಸಂಬಂಧ ಕೆಎಸ್‌ಪಿಸಿಬಿ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಕಳೆದ ವಾರ ಪರಿಸರ ಮತ್ತು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಸಕ್ಕರೆ ಕಾರ್ಖಾನೆಯನ್ನು ಮುಚ್ಚುವಂತೆ ಕೆಎಸ್‌ಪಿಸಿಬಿ ಅಧಿಕಾರಿಗಳಿಗೆ ಕಠಿಣ ಎಚ್ಚರಿಕೆ ನೀಡಿದ ನಂತರ ಮಂಡಳಿಯು ತುರ್ತು ಸಭೆ ನಡೆಸಿತು. ವಿಷಾನಿಲ ಸೋರಿಕೆಯಿಂದ ಇಬ್ಬರು ಕಾರ್ಮಿಕರ ಸಾವಿಗೆ ಕಾರಣವಾದ ಹುಮ್ನಾಬಾದ್‌ನ ಪ್ರಸನ್ನ ಪ್ರಿ ಪ್ರೊಸೆಸಿಂಗ್ ಪ್ರೈಧಿವೇಟ್ ಲಿಮಿಟೆಡ್ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಚಿಂಚೋಳಿಯ ಸಿದ್ಧಶ್ರೀ ಸೌಹಾರ್ದ ಸಹಕಾರಿ ಸಕ್ಕರೆ ಕಾರ್ಖಾನೆಗಳನ್ನು ತಕ್ಷಣದಿಂದಲೇ ಮುಚ್ಚುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶಿಸಿದೆ.