IPL 2024 ಆರಂಭ ಮುನ್ನವೇ ಚೆನ್ನೈ ​ಗೆ ಬಿಗ್ ಶಾಕ್: ಟೀಮ್ ನಿಂದ ದುಬಾರಿ ಆಟಗಾರ ಔಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
 
2024 ರ ಐಪಿಎಲ್​ಗೆ ಭರದ ಸಿದ್ದತೆಗಳು ಆರಂಭವಾಗಿವೆ.ಆಟಗಾರರ ಟ್ರೆಡಿಂಗ್ ಪ್ರಕ್ರಿಯೆ ಕೂಡ ನಡೆಯುತ್ತಿದೆ. ಡಿಸೆಂಬರ್ ಮೊದಲ ವಾರದಲ್ಲಿ ಮಿನಿ ಹರಾಜು ನಡೆಸಲು ಬಿಸಿಸಿಐ ಸಿದ್ದವಾಗಿದೆ.

ಈ ನಡುವೆ ಐಪಿಎಲ್​ನ ಅತ್ಯಂತ ಯಶಸ್ವಿ ತಂಡವಾದ ಚೆನ್ನೈ ಸೂಪರ್ ಕಿಂಗ್ಸ್​ಗೆ (Chennai Super Kings) ಬಿಗ್ ಶಾಕ್ ಎದುರಾಗಿದೆ. ತಂಡದ ಸ್ಟಾರ್ ಆಟಗಾರ ಹಾಗೂ ಇಂಗ್ಲೆಂಡ್​ನ ಆಲ್​ರೌಂಡರ್ ಬೆನ್ ಸ್ಟೋಕ್ಸ್ (Ben Stokes) ಮುಂದಿನ ಆವೃತ್ತಿಯ ಐಪಿಎಲ್​ನಿಂದ ತಮ್ಮ ಹೆಸರನ್ನು ಹಿಂಪಡೆದಿದ್ದಾರೆ.

ಪಾದದ ಗಾಯದಿಂದಾಗಿ ಸ್ಟೋಕ್ ಕಳೆದ ಐಪಿಎಲ್‌ನಲ್ಲಿ ಕೇವಲ 2 ಪಂದ್ಯಗಳನ್ನು ಮಾತ್ರ ಆಡಿದ್ದರು. ಆ ಬಳಿಕ ಸ್ಟೋಕ್ಸ್ ತಂಡದ ಪರ ಕಣಕ್ಕಿಳಿದಿರಲಿಲ್ಲ. ಇದೀಗ ಕೆಲಸದ ಹೊರೆ ನಿರ್ವಾಹಣೆ ಕಾರಣ ನೀಡಿರುವ ಸ್ಟೋಕ್ಸ್ ಮುಂದಿನ ಐಪಿಎಲ್ ಆಡದಿರಲು ನಿರ್ಧರಿಸಿದ್ದಾರೆ.

32 ವರ್ಷದ ಸ್ಟಾರ್ ಆಲ್ ರೌಂಡರ್ ಬೆನ್ ಸ್ಟೋಕ್ಸ್ ಐಪಿಎಲ್ 2024 ರಿಂದ ತಮ್ಮ ಹೆಸರನ್ನು ಹಿಂಪಡೆದಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ಪತ್ರಿಕಾ ಪ್ರಕಟಣೆಯ ಮೂಲಕ ಅಭಿಮಾನಿಗಳಿಗೆ ಈ ಮಾಹಿತಿಯನ್ನು ನೀಡಿದೆ. ಬೆನ್ ಸ್ಟೋಕ್ಸ್ ತಮ್ಮ ಕೆಲಸದ ಹೊರೆಯನ್ನು ನಿರ್ವಹಿಸಲು ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಐಪಿಎಲ್‌ಗೆ ಮೊದಲು, ಅವರು ಭಾರತದಲ್ಲಿ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಬೇಕು. ನಂತರ ಟಿ20 ವಿಶ್ವಕಪ್ ಕೂಡ ಜೂನ್ 2024 ರಲ್ಲಿ ನಡೆಯಲಿದೆ. ಹೀಗಾಗಿ ಸ್ಟೋಕ್ಸ್ ಈ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.

ಪ್ರಸ್ತುತ ಮೊಣಕಾಲಿನ ಗಾಯದಿಂದ ಬಳಲುತ್ತಿರುವ ಬೆನ್ ಸ್ಟೋಕ್ಸ್ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂಬ ಸುದ್ದಿ ಕೂಡ ಕೇಳಿಬರುತ್ತಿದೆ. ಇತ್ತೀಚೆಗೆ ಏಕದಿನ ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ಪರ ಆಡಿದ ಸ್ಟೋಕ್ಸ್​ ವಿಶೇಷವಾದ ಪ್ರದರ್ಶನವನ್ನೇನೂ ನೀಡಲಿಲ್ಲ. ಇದೀಗ ಜನವರಿ 24ರಿಂದ ಆರಂಭವಾಗಲಿರುವ ಭಾರತ ವಿರುದ್ಧದ ಐದು ಟೆಸ್ಟ್‌ಗಳ ಸರಣಿಗೆ ಫಿಟ್ ಆಗಲು ಸ್ಟೋಕ್ಸ್ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ.

ಬೆನ್ ಸ್ಟೋಕ್ಸ್ ಅವರನ್ನು ಚೆನ್ನೈ ಫ್ರಾಂಚೈಸಿ ಕಳೆದ ಹರಾಜಿನಲ್ಲಿ 16.25 ಕೋಟಿ ರೂಪಾಯಿಗೆ ಖರೀದಿಸಿತ್ತು. ಆದರೆ ಸ್ಟೋಕ್ಸ್​ಗೆ ಪಡೆದ ಹಣಕ್ಕೆ ನ್ಯಾಯ ಒದಗಿಸಲು ಸಾಧ್ಯವಾಗಲಿಲ್ಲ. ಹೀಗಾಗಿ ಮುಂದಿನ ತಿಂಗಳು ಯುಎಇಯಲ್ಲಿ ನಡೆಯಲ್ಲಿರುವ ಕಿರು ಹರಾಜಿಗೂ ಮುನ್ನ ಸ್ಟೋಕ್ಸ್ ಅವರನ್ನು ತಂಡದಿಂದ ಕೈಬಿಡಲಾಗುತ್ತದೆ ಎಂಬ ಮಾತು ಕೂಡ ಕೇಳಿಬರುತ್ತಿದ್ದವು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!