Sunday, August 14, 2022

Latest Posts

BIG SHOCKING NEWS | ಕರ್ನಾಟಕಕ್ಕೂ ಕಾಲಿಟ್ಟ ಶಂಕಿತ ಮಂಕಿಪಾಕ್ಸ್?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದೇಶದಲ್ಲಿ ಆತಂಕ ಮೂಡಿಸಿದ ಮಂಕಿಪಾಕ್ಸ್ ಪ್ರಕರಣ ಇದೀಗ ಕರ್ನಾಟಕಕ್ಕೂ ಕಾಲಿಟ್ಟಿದ್ದು, ರಾಜ್ಯದಲ್ಲಿ ಮೊದಲ ಶಂಕಿತ ಮಂಕಿಪಾಕ್ಸ್ ಕೇಸ್ ಇಂದು ಪತ್ತೆಯಾಗಿದೆ ಎನ್ನಲಾಗಿದೆ.

ಈ ಕುರಿತಂತೆ ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಆಫ್ರಿಕಾ ಮೂಲದ ವ್ಯಕ್ತಿಗೆ ಮಂಕಿಪಾಕ್ಸ್ ಲಕ್ಷಣಗಳಿರೋದು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಅವರನ್ನು ರಾಷ್ಟ್ರೀಯ ವೈರಾಲಜಿ ಸಂಸ್ಥೆಯ ಸೂಚನೆ ನೀಡಿದಂತೆ 72 ಗಂಟೆಗಳ ಮಧ್ಯಂತರದಲ್ಲಿ 2 ಬಾರಿ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದಿದೆ.

ಜುಲೈ.4ರಂದು ಆಫ್ರಿಕಾದಿಂದ ಬೆಂಗಳೂರಿಗೆ ಕಿಡ್ನಿ ಕಸಿ ಮಾಡಿಸಿಕೊಳ್ಳೋದಕ್ಕೆ ಅವರು ಬಂದಿದ್ದು, ಆ ಬಳಿಕ ಮೈಮೇಲೆ ತುರಿಕೆ ಹಾಗೂ ದೇಹದ ಕೆಲ ಭಾಗದಲ್ಲಿ ಸಣ್ಣ ಗುಳ್ಳೆಗಳಿದ್ದವು. ಹೀಗೆ ಮಂಕಿಪಾಕ್ಸ್ ಗುಣಲಕ್ಷಣಗಳಿದ್ದ ಕಾರಣ, ಹೆಚ್ಚಿನ ಪರೀಕ್ಷೆ ನಡೆಸಲಾಗುತ್ತಿದೆ. ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಪ್ರಾಥಮಿಕ ಸಂಪರ್ಕಿತರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss