ಹೊಸದಿಗಂತ ಡಿಜಿಟಲ್ ಡೆಸ್ಕ್:
ಖ್ಯಾತ ಉದ್ಯಮಿ ಹಾಗೂ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್ ಅವರ ಆತ್ಮಹತ್ಯೆ ಪ್ರಕರಣ ಇದೀಗ ಹೊಸ ಹಂತಕ್ಕೆ ತಲುಪಿದೆ. ಇತ್ತೀಚೆಗೆ ಕಾನ್ಫಿಡೆಂಟ್ ಗ್ರೂಪ್ ಕಚೇರಿಯಲ್ಲಿ ಶೋಧ ನಡೆಸಿದ ಅಶೋಕನಗರ ಪೊಲೀಸರು ಪ್ರಮುಖ ದಾಖಲೆಗಳೊಂದಿಗೆ ಸಿ.ಜೆ. ರಾಯ್ ಅವರ ವೈಯಕ್ತಿಕ ಡೈರಿಯನ್ನು ವಶಪಡಿಸಿಕೊಂಡಿದ್ದಾರೆ.
ಪೊಲೀಸರು ವಶಕ್ಕೆ ಪಡೆದಿರುವ ಈ ಡೈರಿಯಲ್ಲಿ ಹಲವು ನಟಿಯರು, ಮಾಡೆಲ್‌ಗಳು ಹಾಗೂ ಪ್ರಭಾವಿ ರಾಜಕಾರಣಿಗಳ ಹೆಸರುಗಳು ಉಲ್ಲೇಖವಾಗಿದೆ ಎನ್ನಲಾಗಿದೆ. ಈ ಹೆಸರುಗಳು ಉದ್ಯಮ ಸಂಬಂಧಿತ ಕಾರ್ಯಕ್ರಮಗಳು ಹಾಗೂ ಈವೆಂಟ್‌ಗಳ ಆಯೋಜನೆಗಾಗಿ ಪಟ್ಟಿ ಮಾಡಿರಬಹುದೆಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ:
ಈ ಪಟ್ಟಿಗೆ ಬೇರೆ ಯಾವುದೇ ವೈಯಕ್ತಿಕ ಅಥವಾ ವ್ಯವಹಾರಿಕ ಹಿನ್ನೆಲೆ ಇದೆಯೇ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಡೈರಿಯಲ್ಲಿರುವ ಮಾಹಿತಿಗಳು ಸಿ.ಜೆ. ರಾಯ್ ಅವರ ಕೊನೆಯ ದಿನಗಳ ಮನಸ್ಥಿತಿ ಹಾಗೂ ಅವರು ಎದುರಿಸಿದ್ದ ಒತ್ತಡಗಳ ಬಗ್ಗೆ ಸುಳಿವು ನೀಡುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಡೈರಿಯ ಪ್ರತಿಯೊಂದು ಅಂಶವನ್ನೂ ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದು, ಮುಂದಿನ ದಿನಗಳಲ್ಲಿ ತನಿಖೆ ಇನ್ನಷ್ಟು ವಿಸ್ತಾರಗೊಳ್ಳುವ ನಿರೀಕ್ಷೆ ಇದೆ.



