ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಹಗರಣದಲೋಕಾಯುಕ್ತ ತನಿಖೆ ಕೊನೆಯ ಹಂತ ತಲುಪಿದೆ. ಇದೀಗ ತನಿಖೆ ಬಳಿಕ ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ, ಪತ್ನಿ ಪಾವರ್ತಿ, ಬಾಮೈದ ಮಲ್ಲಿಕಾರ್ಜುನ್, ಜಮೀನು ಮಾಲೀಕ ದೇವರಾಜುಗೆ ಕ್ಲೀನ್‌ಚಿಟ್ ನೀಡಲಾಗಿದೆ.
ನೋಟಿಸ್‌ನಲ್ಲಿ ಸಾಕಷ್ಟು ಸಾಕ್ಷ್ಯಾಧಾರ ಗಳ ಕೊರತೆ ಎಂದು ಹೇಳಿದ್ದು, ಎಲ್ಲ ಆರೋಪಿಗಳ ಆರೋಪಗಳು ಸಾಕ್ಷ್ಯಾಧಾರಗಳ ಕೊರತೆಯಿಂದ ಸಾಬೀತಾಗಿಲ್ಲ ಎಂದು ಹೇಳಿದೆ. ಇನ್ನು ಅಂತಿಮ ವರದಿ ನ್ಯಾಯಾಲಯಕ್ಕೆ ಸಲ್ಲಿಕೆಯಾಗುತ್ತಿದೆ ಎಂದು ದೂರುದಾರ ಸ್ನೇಹಮಯಿ ಕೃಷ್ಣಗೆ ನೋಟಿಸ್ ನೀಡಿದ್ದು, ನೋಟಿಸ್ ತಲುಪಿದ ಒಂದು ವಾರದೊಳಗೆ ವಿರೋಧವಿದ್ದರೆ ನ್ಯಾಯಾಧೀಶರಿಗೆ ತಿಳಿಸಿ ಎಂದು ಹೇಳಲಾಗಿದೆ.
ಲೋಕಾಯುಕ್ತ ಎಸ್ಪಿ ಉದೇಶ್ ಅವರು, ಸ್ನೇಹಮಯಿ ಕೃಷ್ಣ ಅವರಿಗೆ ನೋಟಿಸ್ ನೀಡಿದ್ದು, ಇದರಲ್ಲಿ ನೀವು ನೀಡಿದ ದೂರು ಸಂಬಂಧ A1 ಆರೋಪಿಯಿಂದ A 4 ಆರೋಪಿವರೆಗೆ ವಿಚಾರಣೆ ನಡೆಸಲಾಗಿದೆ. ಇದು ಸಿವಿಲ್ ಸ್ವರೂಪ್ಪದ್ದೂ, ತನಿಕೆ ನಡೆಸಲು ತಕ್ಕುದಲ್ಲ , ಕಾನೂನಿನ ತಪ್ಪು ತಿಳುವಳಿಕೆಯೆಂದು, ಅಲ್ಲದೆ ದೂರಿನಲ್ಲಿ ವಜಾ ಮಾಡಿದ ಪ್ರಕರಣಗಳು ಸಹ ಇದೆ. ಅಲ್ಲದೆ ಸಾಕಷ್ಟು ಸಾಕ್ಷ್ಯಾಧಾರ ಗಳ ಕೊರೆತೆ ಎಂದು ಲೋಕಾ ದೂರುದಾರರಿಗೆ ನೋಟಿಸ್ ನೀಡಿದೆ.
ಈ ಅಂತಿಮ ವರದಿ ನ್ಯಾಯಾಲಯಕ್ಕೆ ಸಲ್ಲಿಕೆಯಾಗುತ್ತಿದೆ. ಆದ್ದರಿಂದ ಇದಕ್ಕೆ ವಿರೋಧವಿದ್ದರೆ ನೋಟಿಸ್ ತಲುಪಿದ ಒಂದು ವಾರದೊಳಗೆ ನ್ಯಾಯಾಧೀಶರಿಗೆ ತಿಳಿಸಿ ಎಂದು ಉಲ್ಲೇಖಿಸಲಾಗಿದೆ.
ಏನಿದು ಮುಡಾ ಹಗರಣ?
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ವಿಚಾರದಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿತ್ತು. 50-50 ಅನುಪಾತದಡಿ ಸರಿಯಾಗಿ ಹಂಚಿಕೆ ಮಾಡದೆ ಬೇಕಾಬಿಟ್ಟಿ ಹಂಚಿಕೆ ಮಾಡಲಾಗಿದ್ದು ಅಂದಾಜು 5 ಸಾವಿರ ಕೋಟಿಯಷ್ಟು ಭಾರೀ ಅಕ್ರಮ ನಡೆದಿದೆ ಎನ್ನುವ ಆರೋಪಗಳು ಕೇಳಿಬಂದಿದ್ದವು.