ಹೊಸದಿಗಂತ ಡಿಜಿಟಲ್ ಡೆಸ್ಕ್:
ಅತ್ಯಾಚಾರ ಆರೋಪದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಶಾಸಕ ಮುನಿರತ್ನ ಸದ್ಯ ಎಸ್‌ಐಟಿ ವಶದಲ್ಲಿ ಇದ್ದು ವಿಚಾರಣೆಯನ್ನು ಎದುರಿಸುತ್ತಿದ್ದಾರೆ, ಇದರ ಮಧ್ಯ ಮುನಿರತ್ನ ಅವರ ಗನ್ ಮ್ಯಾನ್ ಶ್ರೀನಿವಾಸ್ ನಾಪತ್ತೆಯಾಗಿದ್ದಾನೆ.
ಹಾಗಾಗಿ SIT ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದು, ಇಂದು ಶ್ರೀನಿವಾಸ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನ ಸಿಂಗನಾಯಕನಹಳ್ಳಿಯ ಗನ್ ಮ್ಯಾನ್ ಶ್ರೀನಿವಾಸ್ ಮನೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಎರಡು ವಾಹನಗಳಲ್ಲಿ ಬಂದಿರುವ ಎಸ್‌ಐಟಿಯ 8 ಅಧಿಕಾರಿಗಳ ತಂಡ ಇದೀಗ ಪರಿಶೀಲನೆ ನಡೆಸುತ್ತಿದ್ದಾರೆ.
ಸಂತ್ರಸ್ತೆಯನ್ನು ಬೈಕಿನಲ್ಲಿ ಪಿಕ್ ಅಪ್ ಮತ್ತು ಡ್ರಾಪ್ ಮಾಡಿದ ಆರೋಪ ಕೇಳಿ ಬಂದಿದೆ. ಪ್ರಕರಣದಲ್ಲಿ ಶ್ರೀನಿವಾಸ್ ಪಾತ್ರದ ಬಗ್ಗೆ SIT ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಅಲ್ಲದೇ ಶ್ರೀನಿವಾಸ್ ಕುಟುಂಬದವರಿಂದ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಈ ವೇಳೆ ಶ್ರೀನಿವಾಸ್ ನಾಪತ್ತೆಯಾಗಿದ್ದಾನೆ ಎಂದು ಹೇಳಲಾಗುತ್ತಿದೆ .