September 27, 2026
Sunday, September 27, 2026
spot_img

ರೇಣುಕಾ ಸ್ವಾಮಿ ಕೊಲೆ ಕೇಸ್‌ ನಲ್ಲಿ ಬಿಗ್ ಟ್ವಿಸ್ಟ್: ಕ್ರಾಸ್ ಎಕ್ಸಾಮಿನ್ ವೇಳೆ ಪೊಲೀಸರಿಂದ ಎಡವಟ್ಟು?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದ್ದು ಕ್ರಾಸ್ ಎಕ್ಸಾಮಿನ್ ವೇಳೆ ಪೊಲೀಸರಿಂದಲೇ ಎಡವಟ್ಟು ಆಗಿದೆ ಎಂದು ಆರೋಪಿಗಳ ಪರ ವಕೀಲರು ಆರೋಪ ಮಾಡಿದ್ದಾರೆ.

ಆರೋಪಿಗಳಿಂದ ಕೋರ್ಟ್‌ಗೆ ದಿನಕ್ಕೊಂದು ಅರ್ಜಿ ಸಲ್ಲಿಕೆಯಾಗುತ್ತಿದೆ. ನಿನ್ನೆ ಕೋರ್ಟ್‌ಗೆ ಮೂವರು ಆರೋಪಿಗಳು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ನಮ್ಮ ಮೊಬೈಲ್ ವಶಕ್ಕೆ ಪಡೆಯುವಾಗ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ವಶಕ್ಕೆ ಪಡೆದುಕೊಂಡಿಲ್ಲ. ಬೇರೊಂದು ಜಾಗದಲ್ಲಿ ವಶಕ್ಕೆ ಪಡೆದು ಅದನ್ನನ್ನು ಕಾಮಾಕ್ಷಿಪಾಳ್ಯ ಎಂದಿದ್ದಾರೆ ಎಂದು ಆರೋಪಿಸಿದ್ದಾರೆ.

ಇನ್ನು ದೋಷಾರೋಪ ಪಟ್ಟಿ ಸಲ್ಲಿಕೆಯಾದಾಗ ಆರೋಪಿಗಳನ್ನು ಟೈಲ್ಸ್ ಇರೋ ಕ್ಯಾಬಿನ್ ಅಲ್ಲಿ ಫೋಟೋ ತೆಗೆಯಲಾಗಿತ್ತಂತೆ. ಆದರೆ, ಕಾಮಾಕ್ಷಿ ಪಾಳ್ಯದಲ್ಲಿ ಆ ರೀತಿಯ ಟೈಲ್ಸ್ ಇಲ್ಲ ಎಂದು ಹೇಳಲಾಗಿದೆ. ಇದರಿಂದ ಸಾಕಷ್ಟು ಚರ್ಚೆ ಶುರುವಾಗಿದೆ. ಈ ಕುರಿತ ಅರ್ಜಿಯನ್ನು ಸ್ವೀಕಾರ ಮಾಡಿರುವ ನ್ಯಾಯಾಲಯ ವಿಚಾರಣೆ ನಿಗದಿ ಮಾಡಿದೆ.

Must Read