November 2, 2026
Monday, November 2, 2026
spot_img

ಸ್ಟಿಂಗ್ ಆಪರೇಷನ್‌ ಕೇಸ್‌ಗೆ ಬಿಗ್ ಟ್ವಿಸ್ಟ್: ಕೃಪಾ ಆಳ್ವಾ ಸೇರಿ ಮೂವರಿಗೆ ಮಧ್ಯಂತರ ಜಾಮೀನು

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಸ್ಟಿಂಗ್ ಆಪರೇಷನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ವಿನೋದ್ ಕುಮಾರ್ ಮತ್ತು ಪ್ರಶಾಂತ್ ಕುಮಾರ್‌ಗೆ 66ನೇ ಸೆಷನ್ಸ್ ನ್ಯಾಯಾಲಯ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ತನಿಖೆಗೆ ಸಹಕರಿಸಬೇಕು ಹಾಗೂ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು ಎಂದು ನ್ಯಾಯಾಲಯ ಸೂಚಿಸಿದೆ.

ಈ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರ ಹೆಸರು ಪ್ರಸ್ತಾಪವಾಗಿರುವುದು ರಾಜಕೀಯ ವಲಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

ಬೆಂಗಳೂರು ಪೊಲೀಸ್ ಕಮಿಷನರ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ತನಿಖೆ ಪೂರ್ಣಗೊಳ್ಳುವ ಮುನ್ನವೇ ಹೇಳಿಕೆ ನೀಡಿರುವುದೇಕೆ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ, ವಿಡಿಯೋ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳದಿರುವುದರ ಬಗ್ಗೆಯೂ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:

ಇತ್ತ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಪ್ರಕರಣದ ತನಿಖೆ ಎಲ್ಲಾ ಆಯಾಮಗಳಲ್ಲಿ ನಡೆಯುತ್ತಿದೆ ಎಂದು ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ತಾಂತ್ರಿಕ ಸಾಕ್ಷ್ಯಗಳನ್ನು ಬಹಿರಂಗಪಡಿಸಲಾಗುವುದು ಎಂದ ಅವರು, ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ.

ಸ್ಟಿಂಗ್ ಪ್ರಕರಣದ ರಾಜಕೀಯ ಜಟಾಪಟಿಯ ನಡುವೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರನ್ನು ಪುತ್ರ ಯತೀಂದ್ರ ಜೊತೆ ಭೇಟಿ ಮಾಡಿ ಚರ್ಚಿಸಿರುವುದು ಕುತೂಹಲ ಮೂಡಿಸಿದೆ.

Must Read