ಹೊಸದಿಗಂತ ಡಿಜಿಟಲ್ ಡೆಸ್ಕ್:
ಅತ್ಯಾಚಾರ ಆರೋಪದ ಮೇಲೆ ಬಂಧಿತರಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿದ್ದಾಗ ಆತನ ಗೆಳತಿ (ಗರ್ಲ್‍ಫ್ರೆಂಡ್) ಬೆಂಬಲ ನೀಡಿದ್ದಳು ಎಂಬ ಸ್ಫೋಟಕ ಮಾಹಿತಿ ವಿಶೇಷ ತನಿಖಾ ತಂಡದ ತನಿಖೆಯಿಂದ ಬಹಿರಂಗವಾಗಿದೆ.
ಪ್ರಜ್ವಲ್ ರೇವಣ್ಣ ಅನೇಕ ಮಹಿಳೆಯರೊಂದಿಗೆ ಇರುವ ವಿಡಿಯೋ ವೈರಲ್ ಆಗಿದ್ದಾಗ ಅಡಗಿಕೊಳ್ಳಲು ಜರ್ಮನಿಗೆ ಪ್ರಯಾಣ ಬೆಳೆಸಿದ. ಸುಮಾರು 34 ದಿನಗಳ ಕಾಲ ಯಾರೊಂದಿಗೂ ಸಂಪರ್ಕ ಸಾಧಿಸದೆ ಜರ್ಮನಿಯಲ್ಲಿದ್ದರು. ಈ ವಿಚಾರದಲ್ಲಿ ಪ್ರಜ್ವಲ್ ಗರ್ಲ್‍ಫ್ರೆಂಡ್ ಸಹಾಯ ಮಾಡಿದ್ದಾಳೆ ಎಂದು ತಿಳಿದು ಬಂದಿದೆ.
ಅದರಂತೆ ಎಸ್ ಐಟಿ ಅಧಿಕಾರಿಗಳು ಪ್ರಜ್ವಲ್ ಸ್ನೇಹಿತರಿಗೆ ಮಾಹಿತಿ ನೀಡಿದ್ದಾರೆ. ಪ್ರಜ್ವಲ್ ವಿದೇಶದಲ್ಲಿದ್ದಾಗ ಪ್ರಜ್ವಲ್ ಸಹಾಯ ಮಾಡಿದ್ದಕ್ಕೆ ದಾಖಲೆಗಳಿರುವುದರಿಂದ ಪ್ರಕರಣದ ಮಾಹಿತಿ ಕೋರಿ ಪ್ರಜ್ವಲ್ ಗರ್ಲ್‍ಫ್ರೆಂಡ್ ಗೆ ಎಸ್ ಐಟಿ ಅಧಿಕಾರಿಗಳು ಇದೀಗ ನೋಟೀಸ್ ನೀಡಿದ್ದಾರೆ.