ಹೊಸದಿಗಂತ ಡಿಜಿಟಲ್ ಡೆಸ್ಕ್:
ತಾಂತ್ರಿಕ ದೋಷದಿಂದ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ ಪತನಗೊಂಡ ಘಟನೆಗೆ ಸಂಬಂಧಿಸಿದಂತೆ 110 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ.
ವಿಮಾನದಲ್ಲಿ 230 ವಯಸ್ಕರು ಹಾಗು 2 ಮಕ್ಕಳನ್ನು ಒಳಗೊಂಡಂತೆ ಒಟ್ಟು 232 ಪ್ರಯಾಣಿಕರು ಇದ್ದರು. ಈ ಪೈಕಿ 169 ಮಂದಿ ಭಾರತೀಯರು ಇದ್ದರು. ವಿಮಾನ ಎಂಜಿನ್ನಲ್ಲಿ ತಾಂತ್ರಿಕ ದೋಷದಿಂದಾಗಿ ಮೇಘಾನಿ ಪ್ರದೇಶದಲ್ಲಿ ಪತನಗೊಂಡಿದೆ.
ಮೇಘಾನಿ ಪ್ರದೇಶದ ಬಿಜೆ ಮೆಡಿಕಲ್ ಕಾಲೇಜು ಹಾಸ್ಟೆಲ್ಗೆ ವಿಮಾನ ಬಡಿದ್ದಿದ್ದು, ಹಾಸ್ಟೆಲ್ನಲ್ಲಿದ್ದ ಎಂಬಿಬಿಎಸ್ ವಿದ್ಯಾರ್ಥಿಗಳು ಕೂಡ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.