BIG UPDATE | ಕಲಬುರಗಿ ಜನಿವಾರ ಪ್ರಕರಣ: ಇಬ್ಬರು ಅಪ್ರಾಪ್ತ ಬಾಲಕರ ಮೇಲೆ ಎಫ್ಐಆರ್ ದಾಖಲು

ಹೊಸದಿಗಂತ ವರದಿ ಕಲಬುರಗಿ:

ಕಲಬುರಗಿ ನಗರದ ಸೈಂಟ್ ಮೇರಿ ಶಾಲೆಯಲ್ಲಿ ಭಾನುವಾರ ನಡೆದ ನೀಟ್ ಪರೀಕ್ಷೆ ವೇಳೆ, ಪರೀಕ್ಷೆ ಬರೆಯಲು ಬಂದಿದ್ದ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಬೇಟ್ ಬಾಲಕುಂದಾ ಗ್ರಾಮದ ವಿದ್ಯಾರ್ಥಿಯ ಜನಿವಾರ ತೆಗಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಸ್ಟೇಷನ್ ಬಜಾರ್ ಪೋಲಿಸ್ ಠಾಣೆ ವ್ಯಾಪ್ತಿಯ ಇಬ್ಬರು ಅಪ್ರಾಪ್ತ ಬಾಲಕರ ಮೇಲೆ ಎಫ್ಐಆರ್ ದಾಖಲಾಗಿದೆ.

ನೀಟ್ ಪರೀಕ್ಷೆ ವೇಳೆ ಜನಿವಾರ ತೆಗೆಸಿರುವ ಘಟನೆ ಖಂಡಿಸಿ, ಜಿಲ್ಲೆಯ ಬ್ರಾಹ್ಮಣ ಸಂಘದ ಪದಾಧಿಕಾರಿಗಳು ಹಾಗೂ ವಿವಿಧ ಹಿಂದು ಪರ ಸಂಘಟನೆಗಳು ಈ ನಡೆಯನ್ನು ಖಂಡಿಸಿ ಟೈರ್ ಗೆ ಬೆಂಕಿ ಹಚ್ಚಿ,ರಸ್ತೆ ಬಂದ್ ಮಾಡಿ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ಹೊರಹಾಕಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ ಮಾಡಿದ್ದರು.

ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತ ಬಾಲಕರ ಮೇಲೆ ನಗರದ ಸ್ಟೇಷನ್ ಬಜಾರ್ ಪೋಲಿಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!