ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿದ್ದರಾಮಯ್ಯ ಅವರು ಸಿಎಂ ಸ್ಥಾನದಿಂದ ಕೆಳಗೆ ಇಳಿದರೆ ರಾಜ್ಯದಲ್ಲಿ ದೊಡ್ಡ ಕ್ರಾಂತಿ ಆಗುತ್ತದೆ ಎಂದು ವಾಟಳ್ ಪಕ್ಷದ ರಾಜ್ಯಾಧ್ಯಕ್ಷ ವಾಟಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.
ಇಂದು ಬೆಂಗಳೂರಿನ ಮೈಸೂರು ಬ್ಯಾಂಕ್ ಎದುರು ಕನ್ನಡ ರಾಜ್ಯೋತ್ಸವ ಆಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ವಾಟಾಳ್ ನಾಗರಾಜ್, ಕನ್ನಡಪರ ಹೋರಾಟಗಾರರು ಭಾಗಿಯಾಗಿದ್ದರು.
ಈ ವೇಳೆ ಮಾತನಾಡಿದ ವಾಟಾಳ್, ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಿದರೆ ರಾಜ್ಯದಲ್ಲಿ ದೊಡ್ಡ ಕ್ರಾಂತಿ ಆಗುತ್ತದೆ. ಸಿದ್ದರಾಮಯ್ಯ ನಂತರ ಅವರಂತಹ ನಾಯಕ ರಾಜ್ಯದಲ್ಲಿ ಯಾರೂ ಇಲ್ಲ. ಬಿಜೆಪಿ, ಜೆಡಿಎಸ್, ಕಾಂಗ್ರೆಸ್‌ನಲ್ಲೂ ಇಲ್ಲ. ಜೆಡಿಎಸ್‌ನಲ್ಲಿ ಸಿದ್ದರಾಮಯ್ಯರನ್ನು ತೆಗೆದಾಗ ನಾನು ಹೋರಾಟ ಮಾಡಿದ್ದೆ. ಇದು ಮೋಸದ ವ್ಯವಸ್ಥೆ, ರಾಜ್ಯಪಾಲರಿಗೆ ಈ ಅಧಿಕಾರ ಇರಬಾರದು. ಲೋಕಸಭೆಯಲ್ಲಿ ಇದರ ಬಗ್ಗೆ ಸಮಗ್ರವಾಗಿ ಚರ್ಚೆ ಆಗಬೇಕು. ಯಾವುದೇ ಶಕ್ತಿ ನಿಮ್ಮನ್ನು ಇಳಿಸುವುದಕ್ಕೆ ಹೋದರೆ ದೊಡ್ಡ ಕ್ರಾಂತಿ ಆಗುತ್ತದೆ ಎಂದು ಹೇಳಿದರು.