ಕಾಂಗ್ರೆಸ್​ ಗೆ ಭಾರೀ ಮುಖಭಂಗ:​ 55 ಕಾಂಗ್ರೆಸ್ ಕಾರ್ಪೊರೇಟರ್ಸ್​ ಬಿಜೆಪಿಗೆ ಸೇರ್ಪಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ, ಮಾಜಿ ಮುಖ್ಯಮಂತ್ರಿ ಅಶೋಕ್‌ ಚವ್ಹಾಣ್‌ ಅವರ ಸಮ್ಮುಖದಲ್ಲಿ ಮಹಾರಾಷ್ಟ್ರದಲ್ಲಿ 55 ಕಾಂಗ್ರೆಸ್ ಕಾರ್ಪೊರೇಟರ್ಸ್ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಈ ಬೆಳವಣಿಗೆಯಿಂದ ಕಾಂಗ್ರೆಸ್‌ಗೆ ಭಾರೀ ಹಿನ್ನಡೆಯಾಗಿದೆ ಎಂದು ಹೇಳಲಾಗುತ್ತಿದೆ.

ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಅಶೋಕ್‌ ಚವ್ಹಾಣ್‌, ನಾಂದೇಡ್ ವಘಾಲಾ ಮುನ್ಸಿಪಲ್ ಕೌನ್ಸಿಲ್ ಮತ್ತು ಕಾರ್ಪೊರೇಟ್‌ಗಳೊಂದಿಗೆ ಸುದೀರ್ಘ ಚರ್ಚೆಯ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಪ್ರಧಾನಿ ಮೋದಿಯವರ ನಾಯಕತ್ವವನ್ನು ನಂಬಿ ನಾವೆಲ್ಲರೂ ಒಮ್ಮತದಿಂದ ಬಿಜೆಪಿ ಸೇರಲು ನಿರ್ಧರಿಸಿದ್ದೇವೆ. ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿರುವ ಮಾಜಿ ನಗರಸಭಾ ಸದಸ್ಯರಿಗೆ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!