ಬಾಂಗ್ಲಾ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಗೆಲುವು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕುಲ್‌ದೀಪ್ ಯಾದವ್ , ಅಕ್ಷರ್ ಪಟೇಲ್ ಸ್ಪಿನ್ ದಾಳಿಗೆ ಎಡವಿದ ಬಾಂಗ್ಲಾದೇಶ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ 188 ರನ್‌ಗಳ ಸೋಲು ಅನುಭವಿಸಿತು.

4ನೇ ದಿನದಾಟದ ಅಂತ್ಯಕ್ಕೆ ಬಾಂಗ್ಲಾ 6 ವಿಕೆಟ್ ನಷ್ಟಕ್ಕೆ 272 ಗಳಿಸಿ 241 ರನ್‌ಗಳ ಹಿನ್ನಡೆಯಲ್ಲಿತ್ತು. ಇಂದು ಇನ್ನಿಂಗ್ಸ್ ಆರಂಭಿಸಿದ ಬಾಂಗ್ಲಾದೇಶ 113.2 ಓವರ್‌ಗಳಲ್ಲಿ 324 ರನ್‌ಗಳಿಗೆ ಸರ್ವಪತನಕಂಡಿದೆ. ಈ ಮೂಲಕ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಗೆಲುವು ತನ್ನದಾಗಿಸಿಕೊಂಡಿದೆ.

6 ವಿಕೆಟ್‌ಗೆ 272 ರನ್‌ಗಳಿಂದ ಐದನೇ ದಿನ ಆರಂಭಿಸಿದ ಬಾಂಗ್ಲಾದೇಶ ತಂಡ ಬೆಳಗಿನ ಅವಧಿಯಲ್ಲಿ ಕೇವಲ 52 ರನ್‌ಗಳಿಗೆ ತನ್ನ ಕೊನೆಯ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡು 324 ರನ್‌ಗಳಿಗೆ ಆಲೌಟ್ ಆಯಿತು.

ಭಾರತ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಅಂತರದಲ್ಲಿ ಮುನ್ನಡೆ ಸಾಧಿಸಿಲ್ಲದೆ, ಹೆಚ್ಚುಮೌಲ್ಯಯುತವಾದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಗಳನ್ನು ಗಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!