ಹೈದರಾಬಾದ್‌ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: ಆರೋಪಿಗಳಿಗೆ ಜಾಮೀನು

ಹೊಸಗಂತ ಡಿಜಿಟಲ್ ಡೆಸ್ಕ್‌ 
ಕಳೆದ ಒಂದು ತಿಂಗಳ ಹಿಂದೆ ತೀವ್ರ ಆಕ್ರೋಶ ಮತ್ತು ರಾಜಕೀಯ ಘರ್ಷಣೆಗೆ ಕಾರಣವಾಗಿದ್ದ ಹೈದರಾಬಾದ್ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ನಾಲ್ವರು ಅಪ್ರಾಪ್ತ ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.
ಜೂನ್ ಮೊದಲ ವಾರದಿಂದ ಬಂಧಿಸಲಾಗಿದ್ದ ಸ್ಥಳೀಯ ಶಾಸಕನ ಪುತ್ರ ಸೇರಿದಂತೆ ಎಲ್ಲಾ ನಾಲ್ವರು ಆರೋಪಿಗಳನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತನಿಖಾ ಅಧಿಕಾರಿಗಳಿಗೆ ಸಹಕರಿಸುವಂತೆ ಹಾಗೂ ಪ್ರತಿ ತಿಂಗಳ ಮೊದಲ ಸೋಮವಾರದಂದು ಜಿಲ್ಲಾ ಪರೀಕ್ಷಾಧಿಕಾರಿಗಳ ಮುಂದೆ ಹಾಜರಾತಿ ದಾಖಲಿಸುವಂತೆ ಸೂಚಿಸಲಾಗಿದೆ.
ಈ ಪ್ರಕರಣದಲ್ಲಿ ಬಂಧಿತರಾಗಿರುವ ಐದನೇ ಅಪ್ರಾಪ್ತ ಬಾಲಕ ಜಾಮೀನಿಗಾಗಿ ತೆಲಂಗಾಣ ಹೈಕೋರ್ಟ್‌ಗೆ ಮೊರೆ ಹೋಗಿರುವುದರಿಂದ ಬಾಲಾಪರಾಧಿ ಗೃಹದಲ್ಲಿಯೇ ಇರುತ್ತಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಕರಣದ ಏಕೈಕ ವಯಸ್ಕ ಆರೋಪಿ ಸದುದ್ದೀನ್ ಮಲ್ಲಿಕ್ ಜೈಲಿನಲ್ಲಿದ್ದಾನೆ.
ಮೇ 28 ರಂದು ಹೈದರಾಬಾದ್‌ನ ಜುಬಿಲಿ ಹಿಲ್ಸ್ ಪ್ರದೇಶದಲ್ಲಿ ಕಾರಿನಲ್ಲಿ 17 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಆರು ಜನರನ್ನು ಬಂಧಿಸಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!