ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್​ ಬಾಸ್​ ಸ್ಪರ್ಧಿ ಅಕ್ಷತಾ ಕುಕ್ಕಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

‘ಬಿಗ್​ ಬಾಸ್​ ಕನ್ನಡ ಒಟಿಟಿ’ ರಿಯಾಲಿಟಿ ಶೋನಲ್ಲಿ ಮೂಲಕ ಚಿರಪರಿಚಿತರಾದ ಅಕ್ಷತಾ ಕುಕ್ಕಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಮಾರ್ಚ್​ 27ರಂದು ಅಕ್ಷತಾ ಕುಕ್ಕಿ ಅವರು ಅವಿನಾಶ್​ ಜೊತೆ ಸಪ್ತಪದಿ ತುಳಿದಿದ್ದಾರೆ. ಮದುವೆ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಅವರು ಈ ಖುಷಿಯ ಸಮಾಚಾರವನ್ನು ತಿಳಿಸಿದ್ದಾರೆ.

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಕ್ಷತಾ ಕುಕ್ಕಿಗೆ ಅಭಿಮಾನಿಗಳು, ಆಪ್ತರು, ಸೆಲೆಬ್ರಿಟಿಗಳು ಶುಭ ಹಾರೈಸಿದ್ದಾರೆ.

2022ರಲ್ಲಿ ಮೊದಲ ಬಾರಿಗೆ ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಮೊದಲ ಸೀಸನ್​ ಪ್ರಸಾರ ಆಯಿತು. ಅದರಲ್ಲಿ ಸ್ಪರ್ಧಿಸುವ ಅವಕಾಶ ಅಕ್ಷಕಾ ಕುಕ್ಕಿ ಅವರಿಗೆ ಸಿಕ್ಕಿತ್ತು.
ಉತ್ತರ ಕರ್ನಾಟಕ ಶೈಲಿಯಲ್ಲಿ ಮಾತನಾಡುವ ಮೂಲಕ ಅಕ್ಷತಾ ಕುಕ್ಕಿ ಅವರು ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಮೊದಲ ಸೀಸನ್​ನಲ್ಲಿ ಗಮನ ಸೆಳೆದಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!