ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡದ ಕಿರುತೆರೆಯಲ್ಲಿ ಮೂಡಿಬರುತ್ತಿರುವ ಬಿಗ್ ಬಾಸ್ ಸೀಜನ್-10ರ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಅಧಿಕಾರಿಗಳು ಬಂಧಿಸಿದ್ದಾರೆ.
ಹುಲಿ ಉಗುರು ಧರಿಸಿದ್ದ ಆರೋಪದ ಮೇಲೆ ವರ್ತೂರು ಸಂತೋಷ್ ಅವರನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ.
ಇದೇ ಮೊದಲ ಬಾರಿಗೆ ಕನ್ನಡದ ಬಿಗ್ ಬಾಸ್ ಮನೆಯಲ್ಲಿ ಇಂತದ್ದೊಂದು ಘಟನೆ ಜರುಗಿದೆ.
ರಾಮೋಹಳ್ಳಿ ಅರಣ್ಯ ಇಲಾಖೆ ಅಧಿಕಾರಿಗಳು ವರ್ತೂರು ಸಂತೋಷ್ ಅವರನ್ನು ಬಿಗ್ ಬಾಸ್ ಮನೆಯಿಂದ ಹೊರಗಡೆ ಕರೆತಂದಿದ್ದು, ಸದ್ಯ ಸಂತೋಷ್ ಅವರು ಪೊಲೀಸ್ ಕಸ್ಟಡಿಯಲ್ಲಿದ್ದಾರೆ.