October 12, 2026
Monday, October 12, 2026
spot_img

ಬಿಡದಿಯ ರೆಸಾರ್ಟ್‌ಗೆ ಶಿಫ್ಟ್‌ ಆದ ಬಿಗ್‌ಬಾಸ್‌ ಕಂಟೆಸ್ಟೆಂಟ್ಸ್‌, ಟೀಂನಿಂದ ನಾಳೆ ಹೈಕೋರ್ಟ್‌ಗೆ ಅರ್ಜಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪರಿಸರ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಬಿಡದಿಯ ಜಾಲಿವುಡ್‌ ಸ್ಟುಡಿಯೋಗೆ ಅಧಿಕಾರಿಗಳು ಬೀಗ ಜಡಿದಿದ್ದಾರೆ. ಇದರಿಂದ ಸ್ಟುಡಿಯೋದಲ್ಲಿ ನಡೆಯುತ್ತಿದ್ದ ‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋ ಕೂಡ ಬಂದ್‌ ಆಗಿದ್ದು, ಸ್ಪರ್ಧಿಗಳನ್ನು ಬಿಡದಿ ಬಳಿಯ ಖಾಸಗಿ ರೆಸಾರ್ಟ್‌ಗೆ ಸ್ಥಳಾಂತರಿಸಲಾಗಿದೆ.

ಇನ್ನು ಕಾರ್ಯಕ್ರಮಕ್ಕೆ ತಡೆ ನೀಡಿರುವುದನ್ನು ಪ್ರಶ್ನಿಸಿ ಬಿಗ್‌ ಬಾಸ್‌ ಆಯೋಜಕರು‌ ನಾಳೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಬಿಗ್ ಬಾಸ್ ಕನ್ನಡ ಸೀಸನ್ 12 ಎರಡನೇ ವಾರಕ್ಕೆ ಕಾಲಿಟ್ಟಿತ್ತು. ಆದರೆ, ಪರಿಸರ ನಿಯಮ ಉಲ್ಲಂಘಿಸಿದ್ದರಿಂದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು, ಬಿಗ್‌ ಬಾಸ್‌ ರಿಯಾಲಿಟಿ ಶೋ ನಡೆಯುತ್ತಿರುವ ಜಾಲಿವುಡ್‌ ಸ್ಟುಡಿಯೋಗೆ ನೋಟಿಸ್ ಜಾರಿ ಮಾಡಿತ್ತು.

ರಾಮನಗರ ಜಿಲ್ಲೆಯ ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಈ ಸ್ಟುಡಿಯೋ, ಕೊಳಚೆ ನೀರನ್ನು ಸಂಸ್ಕರಿಸದೆ ನೇರವಾಗಿ ಮೋರಿಗೆ ಹರಿಬಿಡುತ್ತಿದೆ. ಇದು ಜಲ ಮಾಲಿನ್ಯ ನಿಯಂತ್ರಣ ಮತ್ತು ಸಂರಕ್ಷಣೆ ಕಾಯ್ದೆ 1974ರ ಉಲ್ಲಂಘನೆಯಾಗಿದೆ. ಈ ಹಿನ್ನೆಲೆಯಲ್ಲಿ ಸ್ಟುಡಿಯೋವನ್ನು ಮುಚ್ಚಲು ಮತ್ತು ವಿದ್ಯುತ್ ಸಂಪರ್ಕ ಕಡಿತಗೊಳಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿತ್ತು.

Must Read