ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಗ್ ಬಾಸ್ ಮನೆಯಲ್ಲಿ ಐಶ್ವರ್ಯಾ ಅವರು ಮೊದಲ ದಿನದಿಂದಲೂ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಲೇ ಇದ್ದಾರೆ. ಅವರು ಒಂದಲ್ಲಾ ಒಂದು ಕಾರಣಕ್ಕೆ ಸುದ್ದಿ ಆಗುತ್ತಿದ್ದಾರೆ. ಈಗ ಅವರ ರೊಮ್ಯಾನ್ಸ್ ವಿಚಾರ ಸಾಕಷ್ಟು ಚರ್ಚೆ ಆಗಿದೆ.
ಐಶ್ವರ್ಯಾ ಹಾಗೂ ಶಿಶಿರ್ ಒಂದೇ ಬೆಡ್‌ಶೀಟ್ ಹೊತ್ತು ಕುಳಿತಿದ್ದಾರೆ. ಐಶ್ವರ್ಯಾ ಅವರ ಕೈಯಲ್ಲಿ ಕಪ್ ಇತ್ತು. ಅದರಲ್ಲಿ ಇದ್ದ ಬಿಸಿ ಕಾಫಿಯನ್ನು ಒಬ್ಬರಾದ ಬಳಿಕ ಒಬ್ಬರು ಹೀರಿದ್ದಾರೆ. ಬಿಗ್‌ಬಾಸ್ ಮನೆಯಲ್ಲಿ ಮತ್ತೊಂದು ಲವ್ ಸ್ಟೋರಿ ಶುರುವಾಗಿದ್ಯಾ ಅನ್ನೋ ಅನುಮಾನ ಕಾಡಿದೆ.
ಐಶ್ವರ್ಯಾ ಅವರಿಗೆ ಶಿಶಿರ್ ಅಂತರ ಇಟ್ಟುಕೊಂಡು ಕಿಸ್ ಕೊಟ್ಟಿದ್ದಾರೆ. ಇದರಿಂದ ಇವರು ಕ್ಲೋಸ್ ಆದರೇ ಎನ್ನುವ ಪ್ರಶ್ನೆ ಮೂಡಿದೆ. ಇಬ್ಬರೂ ರಿಯಲ್ ಲೈಫ್ನಲ್ಲಿ ಸಿಂಗಲ್ ಆಗಿದ್ದಾರೆ. ಹೀಗಾಗಿ, ಬಿಗ್ ಬಾಸ್ನಲ್ಲಿ ಇವರ ಮಧ್ಯೆ ಪ್ರೀತಿ ಹುಟ್ಟಿಕೊಳ್ಳಲಿದೆಯೇ ಎನ್ನುವ ಪ್ರಶ್ನೆ ಮೂಡಿದೆ.