ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಗ್‌ಬಾಸ್ ಖ್ಯಾತಿಯ ವಿನಯ್ ಗೌಡ ಹಾಗೂ ರಜತ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಹೌದು, ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಇದಕ್ಕೆಲ್ಲಾ ಕಾರಣ ಒಂದು ರೀಲ್ಸ್ ಆಗಿದೆ. ರಜತ್ ಹಾಗೂ ವಿನಯ್ ಕೈಯಲ್ಲಿ ಮಚ್ಚು ಹಿಡಿದು ಕರಿಯ ಸಿನಿಮಾ ಸ್ಟೈಲ್‌ನಲ್ಲಿ ರೀಲ್ಸ್ ಒಂದನ್ನು ಮಾಡಿದ್ದಾರೆ. ಈ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗ್ತಿದೆ. ಇದರ ಬೆನ್ನಲ್ಲೇ ಇಬ್ಬರ ಸ್ಪರ್ಧಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.