Friday, November 21, 2025

ಬಿಗ್ ಬಾಸ್ | ಗಿಲ್ಲಿ ನಟನ ಮೇಲೆ ಹಲ್ಲೆ ಆರೋಪ: ಸಹಸ್ಪರ್ಧಿ ರಿಷಾ ವಿರುದ್ಧ ದೂರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಗ್ ಬಾಸ್ ಸೀಸನ್ 12 ರಲ್ಲಿ ಗಿಲ್ಲಿನಟನ ಮೇಲೆ ಸಹ ಸ್ಪರ್ಧಿ ರಿಷಾ ಗೌಡ ಹಲ್ಲೆ ಮಾಡಿದ್ದು, ಆಕೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಗಿಲ್ಲಿ ನಟನ ಅಭಿಮಾನಿಗಳು ರಾಮನಗರ ಜಿಲ್ಲಾ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಈಗಾಗಲೇ ಬಿಗ್‌ಬಾಸ್ ಮನೆಯಲ್ಲಿರುವ ಅಶ್ವಿನಿ ಗೌಡ ಮತ್ತು ಗಿಲ್ಲಿ ನಟ ವಿರುದ್ಧ ದೂರು ದಾಖಲಾಗಿವೆ. ಇದೀಗ ಮತ್ತೋರ್ವ ಸ್ಪರ್ಧಿ ವಿರುದ್ಧ ದೂರು ದಾಖಲಾಗಿದೆ. ಹಳೆಯ ಪ್ರಕರಣವೊಂದು ಮತ್ತೆ ಜೀವ ಪಡೆದುಕೊಂಡಿದ್ದು, ಜಿಲ್ಲಾ ಸಿಇಎನ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸ್ಪರ್ಧಿ ಗಿಲ್ಲಿ ನಟ ಅವರ ಮೇಲೆ ಹಲ್ಲೆ ಸಂಬಂಧ ರಿಷಾ ಗೌಡ ವಿರುದ್ಧ ದೂರು ದಾಖಲಾಗಿದೆ. ಕಾರ್ಯಕ್ರಮದ ಆಯೋಜಕರು ರಿಷಾ ಗೌಡ ವಿರುದ್ಧ ಯಾವುದೇ ಸೂಕ್ತ ಕ್ರಮ ತೆಗೆದುಕೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಗಿಲ್ಲಿ ನಟ ಅಭಿಮಾನಿಗಳು ದೂರು ದಾಖಲಿಸಿದ್ದು, ರಿಷಾ ವಿರುದ್ಧ ಕ್ರಮ ಜರುಗಿಸುವರೆಗೂ ಹೋರಾಟ ಮಾಡುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ.

error: Content is protected !!