ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯರಾತ್ರಿಯೇ ಬಿಡದಿ ಬಳಿ ಇರುವ ಬಿಗ್‌ಬಾಸ್ ಮನೆಯನ್ನು ರಿ ಓಪನ್ ಮಾಡಿದ್ದು, ಸ್ಪರ್ಧಿಗಳನ್ನು ಶಿಫ್ಟ್ ಮಾಡಲಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ಆದೇಶದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ನಸುಕಿನ ಜಾವ 2:45ಕ್ಕೆ ಜಿಲ್ಲಾಧಿಕಾರಿ ಯಶವಂತ್ ವಿ ಗುರುಕರ್, ಎಸ್‌ಪಿ ಶ್ರೀನಿವಾಸ್ ಗೌಡ, ತಹಶಿಲ್ದಾರ್ ತೇಜಸ್ವಿನಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಆಗಮಿಸಿ ಜಾಲಿವುಡ್ ಸ್ಟುಡಿಯೋದ ಗೇಟ್ ಸೀಲ್ ಓಪನ್ ಮಾಡಿದ್ದಾರೆ.
ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿ ಯಶವಂತ್ ವಿ ಗುರುಕರ್ ಮಾತನಾಡಿ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಿರ್ದೇಶನದಂತೆ ರೀ ಓಪನ್ ಮಾಡಿದ್ದೇವೆ. ಜಾಲಿವುಡ್ ಸಂಪೂರ್ಣ ಕಾರ್ಯಾಚರಣೆ ನಡೆಸಲು ಅವಕಾಶ ನೀಡಿಲ್ಲ. ಕೇವಲ ಬಿಗ್ ಬಾಸ್ ಶೋ ಸ್ಪರ್ಧಿಗಳು, ಸಿಬ್ಬಂದಿ ಓಡಾಟ ಹಾಗೂ ಅಗತ್ಯ ವಸ್ತುಗಳ ಬಳಕೆಗೆ ಅವಕಾಶ ಕೊಡಲಾಗಿದೆ. ಬಿಗ್ ಬಾಸ್ ಶೂಟಿಂಗ್ ಆರಂಭದ ಬಗ್ಗೆ ನಾಳೆ ತೀರ್ಮಾನ ಆಗಲಿದೆ ಎಂದು ತಿಳಿಸಿದರು.