Sunday, September 25, 2022

Latest Posts

ಬಿಗ್ ಬಾಸ್ ಕನ್ನಡ ಸೀಸನ್ 9 ಆರಂಭಕ್ಕೆ ಕ್ಷಣಗಣನೆ: ಯಾರೆಲ್ಲಾ ದೊಡ್ಮನೆಯಲ್ಲಿ ಲಾಕ್‌ ಆಗ್ತಾರೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಇನ್ನೇನು ಕೆಲವೇ ದಿನಗಳಲ್ಲಿ ಬಿಗ್ ಬಾಸ್ ಕನ್ನಡ ಸೀಸನ್ 9 ಪ್ರಸಾರವಾಗಲಿದ್ದು, ಸ್ಪರ್ಧಿಗಳ ಎಂಟ್ರಿಗೆ ದೊಡ್ಮನೆ ತಯಾರಾಗುತ್ತಿದೆ.
ಬಿಗ್‌ಬಾಸ್‌ ಕನ್ನಡ ಓಟಿಟಿ ಮುಕ್ತಾಯಗೊಂಡಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ನಿಮ್ಮ ಮನೆಯ ಟಿವಿ ಪರದೆ ಮೇಲೆ ಬಿಗ್ ಬಾಸ್ ಕನ್ನಡ ಸೀಸನ್ 9ಬರಲಿದೆ. ಈಗಾಗಲೇ ಕಿಚ್ಚ ಸುದೀಪ್‌ ಅವರು ಶೋಗೆ ಗ್ರಾಂಡ್ಯ ಎಂಟ್ರಿ ಕೊಟ್ಟಿದ್ದಾರೆ. ಸದ್ಯ ಬಿಗ್‌ ಹೌಸ್‌ ಬಗ್ಗೆ ಕುತೂಹಲ ಮೂಡಿದೆ.

ಈ ಕುರಿತು ಕಲರ್ಸ್ ಕನ್ನಡ ಬಿಸ್ನೆಸ್​ ಹೆಡ್ ಪರಮೇಶ್ವರ್ ಗುಂಡ್ಕಲ್ ಅವರು ಬಿಗ್ ಬಾಸ್ ಮನೆಯ ಹೊಸ ಫೋಟೋ ಒಂದನ್ನು ತಮ್ಮ‌ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, ʼಬಹುತೇಕ ಸಿದ್ಧತೆ ನಡೆದಿದೆʼ ಎಂದು ಕ್ಯಾಪ್ಷನ್‌ ನೀಡಿದ್ದಾರೆ.

ಆದ್ರೆ ಮನೆಯಲ್ಲಿ ಹೆಚ್ಚಿನ ಬದಲಾವಣೆ ಏನೂ ಮಾಡಿಲ್ಲ ಎನ್ನಲಾಗಿದೆ. ಶೋ ಪ್ರಾರಂಭವಾಗಲು ಕೇವಲ ಎರಡು ದಿನ ಬಾಕಿ ಇರುವ ಕಾರಣ ಇನ್ನೋವೇಷನ್ ಮಾಡಲು ಸಾಧ್ಯವಾಗಿಲ್ಲ ಎಂದು ಹೇಳಲಾಗಿದೆ.
ಬಿಗ್ ಬಾಸ್ ಕನ್ನಡ ಸೀಸನ್ 9 ಸೆಪ್ಟೆಂಬರ್ 24 ರಂದು ಆರಂಭವಾಗಲಿದೆ. ಹಳೆಯ ಸೀಸನ್‌ಗಳಲ್ಲಿ ಭಾಗವಹಿಸಿದ್ದವರು ಬಿಗ್ ಬಾಸ್ ಮನೆ ಪ್ರವೇಶ ಮಾಡಲಿದ್ದಾರೆ.

ಬಿಗ್ ಬಾಸ್ ಕನ್ನಡ ಓಟಿಟಿಯಿಂದ ಸೆಲೆಕ್ಟ್‌ ಆದ ಆರ್ಯವರ್ಧನ್ ಗುರೂಜಿ, ರೂಪೇಶ್ ಶೆಟ್ಟಿ, ರಾಕೇಶ್ ಅಡಿಗ, ಸಾನ್ಯಾ ಅಯ್ಯರ್ ಬಿಗ್ ಬಾಸ್ ಕನ್ನಡ ಸೀಸನ್ 9 ರಲ್ಲಿ ಇರಲಿದ್ದಾರೆ.ಹಳೆಯ ಸೀಸನ್​ನ ಸ್ಪರ್ಧಿಗಳಾದ ಪ್ರಶಾಂತ್ ಸಂಬರಗಿ, ಅನುಪಮಾ ಗೌಡ, ದೀಪಿಕಾ ದಾಸ್ ಸೇರಿ ಐವರು ಎಂಟ್ರಿ ಕೊಡುತ್ತಿದ್ದಾರೆ. ಈ 9 ಸ್ಪರ್ಧಿಗಳ ಜತೆ ಮತ್ತೆ 9 ಸ್ಪರ್ಧಿಗಳು ಹೊಸಬರು ಇರುತ್ತಿದ್ದಾರೆ.

ಇನ್ನೂ ಯಾರೆಲ್ಲ ಹೋಗ್ತಾರೆ ಎಂದು ಅನೇಕರ ಹೆಸರು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುತ್ತದೆ. ಸದ್ಯ ವೈರಲ್ ಆಗಿರುವ ಹೆಸರುಗಳೆಂದರೆ ಸೋಶಿಯಲ್ ಮೀಡಿಯಾ ಸ್ಟಾರ್ ಕಾಫಿನಾಡು ಚಂದ್ರು, ಕಮಲಿ ಧಾರಾವಾಹಿ ಖ್ಯಾತಿಯ ಅಮೂಲ್ಯಾ, ಮುದ್ದುಮಣಿಗಳು ಖ್ಯಾತಿಯ ಸಮೀಕ್ಷಾ, ಗಿಚ್ಚಿ ಗಿಲಿಗಿಲಿ ಖ್ಯಾತಿಯ ಪ್ರಿಯಾಂಕಾ ಕಾಮತ್, ಮಜಾಭಾರತ ಖ್ಯಾತಿಯ ಚಂದ್ರಪ್ರಭ, ಗಾಯಕಿ ಆಶಾ ಭಟ್ ಹೆಸರುಗಳು ಕೇಳಿಬರುತ್ತಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!