ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಜಾ ಭಾರತ, ಗಿಚ್ಚಿ ಗಿಲಿಗಿಲಿ, ಬಿಗ್ಬಾಸ್ ಮೂಲಕ ಎಲ್ಲರ ಮನೆಮಾತಾಗಿರೋ ನಟ ಮಂಜು ಪಾವಗಡ ಅವರು ಸದ್ದಿಲ್ಲದೇ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಬಿಗ್ಬಾಸ್ ಮೂಲಕ ಅಪಾರ ಅಭಿಮಾನಿಗಳನ್ನು ಗಳಿಸಿಕೊಂಡ ಹ್ಯಾಸನಟ ಮಂಜು ಪಾವಗಡ ಸದ್ಯ ಜಂಟಿಯಾಗಿದ್ದಾರೆ. ಸದ್ಯ ಪಾವಗಡದಲ್ಲಿ ಮಂಜು ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮುಂದಿನ ನವೆಂಬರ್ನಲ್ಲಿ ಸಪ್ತಪದಿ ತುಳಿಯಲಿದ್ದಾರೆ. ಗುರು ಹಿರಿಯರ ಸಮ್ಮುಖದಲ್ಲಿ ಮಂಜು ಅವರು ನಂದಿನಿ ಎಂಬುವವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.ಇವರು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾರೆ.
ಇನ್ನೂ ಮಂಜು ಪಾವಗಡ ಹಾಗೂ ನಂದಿನಿ ನವೆಂಬರ್ 13 ಹಾಗೂ 14ರಂದು ಪಾವಗಡದಲ್ಲಿ ಮದುವೆ ನಡೆಯಲಿದೆ.
ಮೊನ್ನೆಯಷ್ಟೇ ಮಂಜು ಪಾವಗಡ ಅವರು ಬೆಂಗಳೂರಿನಲ್ಲಿಯೇ ತಮ್ಮ ಹೊಸ ಮನೆಗೆ ಪ್ರವೇಶ ಮಾಡಿದ್ದರು. ಹೊಸ ಮನೆಯೆ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದವು.