ಹೊಸ ದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ-ಮುಂಬೈ ಎಕ್ಸ್‌ಪ್ರೆಸ್ ವೇಯ 246-ಕಿಮೀ ದೆಹಲಿ-ದೌಸಾ-ಲಾಲ್ಸೋಟ್ ವಿಭಾಗವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಫೆ.12ರಂದು ಉದ್ಘಾಟಿಸಲಿದ್ದಾರೆ.
ಹೊಸ ವಿಸ್ತರಣೆಯೊಂದಿಗೆ ರಾಷ್ಟ್ರ ರಾಜಧಾನಿಯಿಂದ ಜೈಪುರಕ್ಕೆ ಪ್ರಯಾಣದ ಸಮಯವನ್ನು ಐದು ಗಂಟೆಗಳಿಂದ ಸುಮಾರು ಮೂರೂವರೆವರೆಗೆ ಕಡಿಮೆ ಮಾಡಲಿದೆ.
ಇದನ್ನು ಬರೋಬ್ಬರಿ 12,150 ಕೋಟಿ ರೂ. ಅಧಿಕ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದ್ದು, ಇದು ಇಡೀ ಪ್ರದೇಶದ ಆರ್ಥಿಕ ಅಭಿವೃದ್ಧಿಗೆ ಪ್ರಮುಖ ಉತ್ತೇಜನ ನೀಡುತ್ತದೆ ಎಂದು ಪ್ರಧಾನಮಂತ್ರಿಗಳ ಕಚೇರಿ ಹೇಳಿದೆ.
ಈ ಸಂದರ್ಭ ಮೋದಿಯವರು ದೌಸಾದಿಂದ 18,100 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ರಸ್ತೆ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.
ಈ ಎಕ್ಸ್‌ಪ್ರೆಸ್‌ವೇ ದೆಹಲಿ, ಹರಿಯಾಣ, ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್ ಮತ್ತು ಮಹಾರಾಷ್ಟ್ರದ ಆರು ರಾಜ್ಯಗಳ ಮೂಲಕ ಹಾದುಹೋಗುತ್ತದೆ ಮತ್ತು ಕೋಟಾ, ಇಂದೋರ್, ಜೈಪುರ, ಭೋಪಾಲ್, ವಡೋದರಾ ಮತ್ತು ಸೂರತ್‌ನಂತಹ ಪ್ರಮುಖ ನಗರಗಳನ್ನು ಸಂಪರ್ಕಿಸುತ್ತದೆ.