BIGG NEWS : ರಿಷಬ್ ಪಂತ್ ರ ‘ಉತ್ತಮ ಆರೋಗ್ಯ- ಯೋಗಕ್ಷೇಮ’ಕ್ಕಾಗಿ ಪ್ರಾರ್ಥಿಸಿದ ಪ್ರಧಾನಿ ಮೋದಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಭಾರತದ ವಿಕೆಟ್ ಕೀಪರ್ ಬ್ಯಾಟ್ಸ್ ಮ್ಯಾನ್ ರಿಷಭ್ ಪಂತ್ ಅವರ ಕಾರು ಶುಕ್ರವಾರ ಬೆಳಿಗ್ಗೆ ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ಹಿಂತಿರುಗುವಾಗ ಅಪಘಾತಕ್ಕೀಡಾಗಿದ್ದು, ಅವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಬಲ ಮಣಿಕಟ್ಟು, ಪಾದ, ಕಾಲ್ಬೆರಳು ಮತ್ತು ಬೆನ್ನಿನ ಮೇಲೆ ಗಾಯವಾಗಿದೆ ಎಂದು ಹರಿದ್ವಾರದ ಹಿರಿಯ ಪೊಲೀಸ್ ಅಧೀಕ್ಷಕ ಅಜಯ್ ಸಿಂಗ್ ತಿಳಿಸಿದ್ದಾರೆ.

ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದು, ರಿಷಭ್ ಪಂತ್ ಅವರ ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!