ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ಮೋದಿಯವರು ಫೆ. 11 ಮತ್ತು ಫೆ. 13 ರಂದು ತ್ರಿಪುರಾಕ್ಕೆ ಭೇಟಿ ನೀಡಲಿದ್ದು, ಎರಡು ಚುನಾವಣಾ rallyಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಫೆ. 11 ರಂದು ಪ್ರಧಾನಿ ಮೋದಿಯವರು ಈಶಾನ್ಯ ರಾಜ್ಯಗಳ ಗೋಮತಿ ಮತ್ತು ಧಲೈ ಜಿಲ್ಲೆಗಳಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಫೆ.13 ರಂದು ರಾಜಧಾನಿ ಅಗರ್ತಲಾದಲ್ಲಿ ಚುನಾವಣಾ ಪ್ರಚಾರ ಉದ್ದೇಶಿಸಿ ಮಾತನಾಡಲಿದ್ದಾರೆ.
ಫೆ. 16 ಕ್ಕೆ ತ್ರಿಪುರಾ ಚುನಾವಣೆ
ಸುಮಾರು 60 ಸದಸ್ಯ ಬಲದ ತ್ರಿಪುರಾ ವಿಧಾನಸಭೆಗೆ ಫೆ. 16 ರಂದು ಚುನಾವಣೆ ನಡೆಯಲಿದ್ದು, ಮಾರ್ಚ್ 2 ರಂದು ಮತ ಎಣಿಕೆ ನಡೆಯಲಿದೆ. ಬಿಜೆಪಿ 55 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ತನ್ನ ಮಿತ್ರ ಪಕ್ಷವಾದ ಐಪಿಎಫ್ ಟಿಗೆ ಐದು ಸ್ಥಾನಗಳನ್ನು ಬಿಟ್ಟುಕೊಟ್ಟಿದೆ.
ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಮೂರನೇ ಅವಧಿಗೆ ತನ್ನ ಸರ್ಕಾರವನ್ನು ಉಳಿಸಿಕೊಳ್ಳಲು ರಾಜ್ಯದಲ್ಲಿ ಪ್ರಚಾರ ನಡೆಸುತ್ತಿದೆ.