ಹೊಸ ದಿಗಂತ ಡಿಜಿಟಲ್ ಡೆಸ್ಕ್
ಕೆಲವು ರಸ್ತೆಗಳು ಮತ್ತು ಹೇಮಕುಂಡ್ ಸಾಹಿಬ್ ರೋಪ್ ವೇಗೆ ಶಂಕುಸ್ಥಾಪನೆ ನೆರವೇರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಕೇದಾರನಾಥ ಮತ್ತು ಬದರಿನಾಥಕ್ಕೆ ಶುಕ್ರವಾರ ಭೇಟಿ ನೀಡಲಿದ್ದು, ಈ ಹಿನ್ನೆಲೆ ಸಿದ್ದತೆಗಳು ಭರದಿಂದ ಸಿದ್ಧತೆಗಳು ಸಾಗಿವೆ.
ಬದರೀನಾಥ್-ಕೇದಾರನಾಥ ಮಂದಿರ ಸಮಿತಿಯ ಪ್ರಧಾನ ಅರ್ಚಕ ಗಂಗಾ ಧರ್ ಲಿಂಗ ಮಾತನಾಡಿ, ‘ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಮುಂಚಿತವಾಗಿ ಕೇದಾರನಾಥದಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. ಪ್ರಧಾನಿ ಮೋದಿ ಅವರು ಶುಕ್ರವಾರ ಬೆಳಿಗ್ಗೆ ಕೇದಾರನಾಥದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದಾರೆ.ಬಳಿಕ ಅವರು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದರು.
ರುದ್ರಪ್ರಯಾಗದ ಜಿಲ್ಲಾ ಮ್ಯಾಜಿಸ್ಟ್ರೇಟ್ ಮಯೂರ್ ದೀಕ್ಷಿತ್ ಮಾತನಾಡಿ, ‘ಪ್ರಧಾನಿ ಮೋದಿ ಅವರು ನಾಳೆ ಕೇದಾರನಾಥ ಧಾಮ್ನಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಬಳಿಕ ಅವರು ಮಂದಾಕಿನಿ ಅಷ್ಟಪಥ್, ಸರಸ್ವತಿ ಅಷ್ಟಪಥ ಮತ್ತು ಇತರ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲಿಸಲಿದ್ದಾರೆ. ಇಲ್ಲಿನ ನಿರ್ಮಾಣ ಕಾರ್ಮಿಕರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಹೇಳಿದರು.
ಪ್ರಧಾನಿ ಕಾರ್ಯಾಲಯದ ಪ್ರಕಾರ, ಪ್ರಧಾನಿ ಮೋದಿ ಅವರು ನಾಳೆ ಬೆಳಿಗ್ಗೆ 8.30 ರ ಸುಮಾರಿಗೆ ಕೇದಾರನಾಥ ದೇವಾಲಯದಲ್ಲಿ ದರುಶನ ಮತ್ತು ಪೂಜೆಯನ್ನು ನೆರವೇರಿಸಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಅವರು ಕೇದಾರನಾಥ ರೋಪ್ ವೇ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಅವರು ಆದಿ ಗುರು ಶಂಕರಾಚಾರ್ಯ ಸಮಾಧಿ ಸ್ಥಳಕ್ಕೆ ಭೇಟಿ ನೀಡಲಿದ್ದು, ಬೆಳಿಗ್ಗೆ 9.25ಕ್ಕೆ ಮಂದಾಕಿನಿ ಅಷ್ಟಪಥ ಮತ್ತು ಸರಸ್ವತಿ ಅಷ್ಟಪಥದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ ಎಂದು ತಿಳಿಸಿದೆ.