ಕರ್ನಾಟಕದ ಇತಿಹಾಸದಲ್ಲೇ ಅತೀ ದೊಡ್ಡ ಡ್ರಗ್ಸ್ ರೈಡ್: 75 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದ ಇತಿಹಾಸದಲ್ಲಿ ಅತೀ ದೊಡ್ಡ ಡ್ರಗ್ಸ್ ಕಾರ್ಯಾಚರಣೆ ನಡೆದಿದ್ದು, ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ 75 ಕೋಟಿ ರೂ. ಮೌಲ್ಯದ 37.87 ಕೆಜಿ ಡ್ರಗ್ಸ್​ ಜಪ್ತಿ ಮಾಡಿದ್ದಾರೆ. ಇಬ್ಬರು ವಿದೇಶಿ ಪ್ರಜೆಗಳನ್ನು ಬಂಧಿಸಿದ್ದಾರೆ.

ವಾರಕ್ಕೆ 15-30 ಕೆಜಿ ಮತ್ತು ತಿಂಗಳಿಗೆ ಕನಿಷ್ಠ 100 ಕೆಜಿ ಎಮ್​ಡಿಎಮ್​ಎ ಡ್ರಗ್ಸ್ ಬೆಂಗಳೂರಿಗೆ ಬರುತ್ತಿದೆ. ಬೆಂಗಳೂರಿನಲ್ಲಿ ತಿಂಗಳಿಗೆ ಕನಿಷ್ಠ 50-60 ಕೋಟಿ ರೂಪಾಯಿ ಡ್ರಗ್ ವಹಿವಾಟು ನಡೆಯುತ್ತದೆ ಎಂಬ ಅಂಶ ಪೊಲೀಸರ ತನಿಖೆಯಲ್ಲಿ ಬಹಿರಂಗವಾಗಿದೆ.

ಮಂಗಳೂರು ಪೊಲೀಸ್ ಕಮಿಷನರ್​ ಅನುಪಮ್ ಅಗರ್ವಾಲ್​ ಮಾತನಾಡಿ, ಕರ್ನಾಟಕದ ಇತಿಹಾಸದಲ್ಲೇ ಅತೀ ದೊಡ್ಡ ಡ್ರಗ್ಸ್ ಕಾರ್ಯಾಚರಣೆ ನಡೆದಿದೆ. ದಕ್ಷಿಣ ಆಫ್ರಿಕಾ ದೇಶದ ಇಬ್ಬರು ಮಹಿಳಾ ಪ್ರಜೆಗಳನ್ನು ಬಂಧಿಸಿದ್ದೇವೆ ಎಂದು ತಿಳಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!