ಟೆಸ್ಟ್‌ ಇತಿಹಾಸದಲ್ಲಿ ಟೀಮ್ ಇಂಡಿಯಾಗೆ ಅತಿದೊಡ್ಡ ಗೆಲುವು: ಇಂಗ್ಲೆಂಡ್‌ 122 ರನ್‌ಗೆ ಆಲೌಟ್‌

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂಗ್ಲೆಂಡ್‌ ವಿರುದ್ಧದ 3ನೇ ಟೆಸ್ಟ್‌ನಲ್ಲಿ ಜಡೇಜಾ ಸ್ಪಿನ್‌ ದಾಳಿಗೆ ಎಡವಿದ ಆಂಗ್ಲ ಆಟಗಾರರು 122ಕ್ಕೆ ತನ್ನೆಲ್ಲ ವಿಕೆಟ್‌ ಕಳೆದುಕೊಂಡು ಸೋಲನುಭವಿಸಿತು , ಈ ಮೂಲಕ ಭಾರತ ತಂಡ 434 ರನ್‌ಗಳಿಂದ ಗೆದ್ದು ಬೀಗಿದೆ.

ಟೀಂ ಇಂಡಿಯಾ ನೀಡಿದ್ದ 557 ರನ್‌ ಗುರಿ ಬೆನ್ನಟ್ಟಿದ ಇಂಗ್ಲೆಂಡ್‌ 122ಕ್ಕೆ ತನ್ನೆಲ್ಲ ವಿಕೆಟ್‌ ಕಳೆದುಕೊಂಡು ಸೋಲನುಭವಿಸಿತು. ಇದರಿಂದ ಭಾರತ ತಂಡ ಐದು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ 2-1 ಮುನ್ನಡೆಗೇರಿದೆ. ಇದು ಟೆಸ್ಟ್‌ ಕ್ರಿಕೆಟ್‌ ಇತಿಹಾಸದಲ್ಲಿ ದೊಡ್ಡ ಗೆಲುವು ಎನಿಸಿದೆ.

ಇಂಗ್ಲೆಂಡ್ ತಂಡದ ಬ್ಯಾಟಿಂಗ್‌ಗೆ ಆಧಾರವಾಗಿ ಯಾರೂ ನಿಲ್ಲಲೇ ಇಲ್ಲ. ತಂಡದ ಮೊತ್ತ 28 ರನ್ ಆದಾಗ ಇಂಗ್ಲೆಂಡ್ ಆಗಲೇ ಪ್ರಮುಖ 4 ವಿಕೆಟ್‌ಗಳನ್ನು ಕಳೆದುಕೊಂಡಿತ್ತು.ಮೊದಲ ಇನ್ನಿಂಗ್ಸ್ನಲ್ಲಿ 153 ರನ್‌ಗಳ ಸ್ಫೋಟಕ ಆಟವಾಡಿದ್ದ ಆರಂಭಿಕ ಆಟಗಾರ ಬೆನ್ ಡಕೆಟ್ ಎರಡನೇ ಇನ್ನಿಂಗ್ಸ್ನಲ್ಲಿ ಕೇವಲ 4 ರನ್ ಗಳಿಸಿ ಔಟಾದರು.

6ನೇ ಓವರ್‌ನಲ್ಲಿ ಇಂಗ್ಲೆಂಡ್ ತಂಡ 15 ರನ್ ಗಳಿಸಿದ್ದಾಗ ಡಕೆಟ್ ಔಟಾದರು. ಮತ್ತೆ ಮೂರು ರನ್ ಸೇರಿಸುವಷ್ಟರಲ್ಲಿ ಇನ್ನೊಬ್ಬ ಆರಂಭಿಕ ಆಟಗಾರ ಝಕ್ ಕ್ರಾಲಿ 11 ರನ್ ಗೆ ಔಟಾದರು. ಬೂಮ್ರಾ ಎಸೆತಕ್ಕೆ ಕ್ರಾಲಿ ಎಲ್‌ಬಿಡಬ್ಲ್ಯೂಗೆ ಬಲಿಯಾದರು.

10ನೇ ಓವರ್‌ನಲ್ಲಿ ಜಡೇಜಾ ಎಸೆತಕ್ಕೆ ಬ್ಯಾಟ್ ಬೀಸಿದ ಓಲ್ಲಿ ಪೊಪೆ 3 ರನ್ ಗಳಿಸಿ ಔಟಾದರು. 12ನೇ ಓವರ್‌ನಲ್ಲಿ ಜಾನಿ ಬೇರ್‌ಸ್ಟೋ 4 ರನ್ ಗಳಿಸಿ ರವೀಂದ್ರ ಜಡೇಜಾಗೆ ಎಲ್‌ಬಿಡಬ್ಲ್ಯೂಗೆ ಬಲಿಯಾದರು.ತಂಡದ ಮೊತ್ತ 50 ತಲುಪಿದಾಗ ಇಂಗ್ಲೆಂಡ್ ಮತ್ತೆ 3 ವಿಕೆಟ್ ಕಳೆದುಕೊಂಡಿತು. ಜೋ ರೂಟ್ 4 ರನ್ ಗೆ ಔಟಾದರೆ, ಬೆನ್ ಸ್ಟೋಕ್ಸ್ 15 ಹಾಗೂ ರೆಹಾನ್ ಅಹ್ಮದ್ ಶೂನ್ಯ ಸುತ್ತಿ ಪೆವಿಲಿಯನ್‌ನತ್ತ ಮುಖ ಮಾಡಿದರು.36ನೇ ಓವರ್‌ನಲ್ಲಿ ಬೆನ್ ಫೋಕ್ಸ್ 16 ರನ್ ಗಳಿಸಿ ಜಡೇಜಾ ಬೌಲಿಂಗ್‌ನಲ್ಲಿ ಔಟಾದರು. 37ನೇ ಓವರ್‌ನಲ್ಲಿ ತಂಡದ ಮೊತ್ತ 91 ತಲುಪಿದಾಗ ಟಾಮ್ ಹಾರ್ಟ್ಲಿ ಔಟಾದರು. ಕೊನೆಯದಾಗಿ ಮಾರ್ಕ್ ವುಡ್ 33 ರನ್ ಗಳಿಸಿ ಜಡೇಜಾಗೆ ವಿಕೆಟ್ ಒಪ್ಪಿಸಿದರು.

ಟೀಂ ಇಂಡಿಯಾ ಪರವಾಗಿ ಜಡೇಜಾ 5, ಕುಲ್ದೀಪ್ ಯಾದವ್ 2, ಜಸ್ಪ್ರಿತ್‌ ಬೂಮ್ರಾ 1 ಹಾಗೂ ರವಿಚಂದ್ರನ್ ಅಶ್ವಿನ್ 1 ವಿಕೆಟ್ ಪಡೆದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!