Saturday, February 4, 2023

Latest Posts

ಮಹಿಳಾ ಕಾನ್‌ಸ್ಟೇಬಲ್‌ಗಳ ದರ್ಪ:ವೃದ್ಧ ಶಿಕ್ಷಕನಿಗೆ ಥಳಿಸಿದ ವಿಡಿಯೋ ವೈರಲ್, ಅಮಾನತು ಶಿಕ್ಷೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬಿಹಾರದ ಕೈಮೂರ್ ಜಿಲ್ಲೆಯಲ್ಲಿ ಶುಕ್ರವಾರ ಇಬ್ಬರು ಮಹಿಳಾ ಕಾನ್‌ಸ್ಟೆಬಲ್‌ಗಳು ವಯೋವೃದ್ಧ ಶಿಕ್ಷಕಿಯೊಬ್ಬರ ಮೇಲೆ ದೊಣ್ಣೆಯಿಂದ ಥಳಿಸಿದ್ದರು. ಘಟನೆಯ ವಿಡಿಯೋ ಅಂತರ್ಜಾಲದಲ್ಲಿ ವೈರಲ್ ಆಗಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಲಿತ್ ಮೋಹನ್ ಶರ್ಮಾ ಅವರು ಈ ವಿಷಯವನ್ನು ಅರಿತು 24 ಗಂಟೆಗಳ ಒಳಗೆ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ಅವರಿಂದ ವರದಿ ಪಡೆದು ಇಬ್ಬರು ಮಹಿಳಾ ಪೊಲೀಸ್ ಪೇದೆಗಳನ್ನು ಶನಿವಾರ ಮೂರು ತಿಂಗಳ ಕಾಲ ಅಮಾನತುಗೊಳಿಸಿದ್ದಾರೆ.

ಸಂತ್ರಸ್ತರನ್ನು ನವಲ್ ಕಿಶೋರ್ ಪಾಂಡೆ ಎಂದು ಗುರುತಿಸಲಾಗಿದ್ದು, ಭಬುವಾ ಜಿಲ್ಲೆಯ ಪರ್ಮಲ್‌ಪುರ ಗ್ರಾಮದ ದೆಹಲಿ ಪೊಲೀಸ್ ಶಾಲೆಯಲ್ಲಿ ಇಂಗ್ಲಿಷ್ ಶಿಕ್ಷಕರಾಗಿದ್ದಾರೆ.

ಘಟನೆಯನ್ನು ವಿವರಿಸಿದ ಅವರು, “ನಾನು ಶಾಲೆಯಿಂದ ಮನೆಗೆ ಸೈಕಲ್‌ನಲ್ಲಿ ಹೋಗುತ್ತಿದ್ದೆ. ಜೈಪ್ರಕಾಶ್ ಚೌಕ್‌ನಲ್ಲಿ ರಸ್ತೆ ದಾಟುತ್ತಿದ್ದಾಗ ಮಹಿಳಾ ಕಾನ್‌ಸ್ಟೆಬಲ್‌ಗಳು ನನಗೆ ಏನೋ ಹೇಳಿದರು, ನಾನು ಅದನ್ನು ನಿರ್ಲಕ್ಷಿಸಿ ಮುಂದೆ ಸಾಗಿದೆ. ನಂತರ, ಅವರು ನನ್ನ ಬೈಸಿಕಲ್ ಅನ್ನು ಹಿಂದಿನಿಂದ ನಿಲ್ಲಿಸಿ ಮನಬಂದಂತೆ ನನ್ನನ್ನು ನಿಂದಿಸಿದ್ದಾರೆ ಎಂದು ಆರೋಪಿಸಿದರು. ನಂತರ ನನ್ನನ್ನು ಲಾಠಿಯಿಂದ 20 ಬಾರಿ ಹೊಡೆದಿದ್ದಾರೆ ಎಂದರು.

ಮಧ್ಯಾಹ್ನ 3 ಗಂಟೆಗೆ ಈ ಘಟನೆ ನಡೆದಿದ್ದು, ಶಿಕ್ಷಕರ ಕೈ ಕಾಲುಗಳಿಗೆ ಗಾಯಗಳಾಗಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!