March 31, 2026
Tuesday, March 31, 2026
spot_img

ಯುಪಿ ಸಿಎಂ ಯೋಗಿ ಆದಿತ್ಯನಾಥ್ ತಾಯಿ ಕುರಿತು ಆಕ್ಷೇಪಾರ್ಹ ಹೇಳಿಕೆ: ಬಿಹಾರ ಮೂಲದ ಮೌಲ್ವಿ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಿಹಾರ ಮೂಲದ ಮೌಲ್ವಿ ಅಬ್ದುಲ್ ಸಲೀಂ ನನ್ನು ಎಸ್‌ಟಿಎಫ್ ಅಧಿಕಾರಿಗಳು ಬಂಧಿಸಿದ್ದಾರೆ.

ಮೌಲಾನಾ ಅಬ್ದುಲ್ ಸಲೀಂ ಭಾಷಣದಲ್ಲಿ ಯೋಗಿ ಆದಿತ್ಯನಾಥ್ ಅವರ ತಾಯಿಯ ಕುರಿತು ಅವಹೇಳನಕಾರಿ ಭಾಷೆ ಬಳಸಿದ್ದರು. ಈ ಸಂಬಂಧ ಮಾರ್ಚ್ 8ರಂದು ಕೊಟ್ವಾಲಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಎಸ್‌ಟಿಎಫ್ ಅಧಿಕಾರಿಗಳು ಪ್ರಕರಣ ದಾಖಲಿಸಿ , ಬಿಹಾರದ ಪೂರ್ಣಿಯಾದಿಂದ ಆರೋಪಿಯನ್ನು ಬಂಧಿಸಿದ್ದಾರೆ. ನಂತರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು , ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

ಆರೋಪಿ ನ್ಯಾಯಾಲಯಕ್ಕೆ ಹಾಜರುಪಡಿಸುವ ಮೊದಲು ತನ್ನ ಅಪರಾಧವನ್ನು ಒಪ್ಪಿಕೊಂಡು ಕ್ಷಮೆಯಾಚಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !