ಪ್ರಧಾನಿ ಮೋದಿಯನ್ನು ಭೇಟಿಯಾದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಅವರು ಬುಧವಾರ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಭೇಟಿಯಾಗಿದ್ದಾರೆ.

ರಾಷ್ಟ್ರೀಯ ಜನತಾ ದಳ (Rashtriya Janata Dal) ಮತ್ತು ಕಾಂಗ್ರೆಸ್ ಒಳಗೊಂಡಿರುವ ‘ಮಹಾಘಟಬಂಧನ್’ (ಮೈತ್ರಿಕೂಟ) ತೊರೆದು ಬಿಜೆಪಿ ಬೆಂಬಲದೊಂದಿಗೆ ರಾಜ್ಯದಲ್ಲಿ ಸರ್ಕಾರ ರಚಿಸಿದ ದಿನಗಳ ನಂತರ ನಿತೀಶ್ , ಪ್ರಧಾನಿಯನ್ನು ಭೇಟಿ ಮಾಡಿದ್ದಾರೆ.

ಬಿಜೆಪಿ ಜತೆ ಕೈ ಜೋಡಿಸುವ ಮುನ್ನ ನಿತೀಶ್ ಅವರು ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾದಲ್ಲಿ ಎಲ್ಲವೂ ಸರಿಯಾಗಿಲ್ಲ ಎಂದು ಹೇಳಿದ್ದರು, ಇದು ಲೋಕಸಭೆ ಚುನಾವಣೆ 2024 ರ ಮೊದಲು ಬಣವನ್ನು ತೊರೆಯುವ ನಿರ್ಧಾರಕ್ಕೆ ಕಾರಣವಾಯಿತು.

ಫೆಬ್ರವರಿ 12 ರಂದು ಅಸೆಂಬ್ಲಿಯಲ್ಲಿ ಕುಮಾರ್ ನೇತೃತ್ವದ ಸರ್ಕಾರವು ವಿಶ್ವಾಸ ಮತ ಸಾಬೀತು ಪಡಿಸಲಿದೆ. ಇದಕ್ಕೆ ಐದು ದಿನಗಳ ಮುಂಚಿತವಾಗಿ ಈ ಸಭೆ ನಡೆದಿದೆ. ಬಿಹಾರದ ಉಪಮುಖ್ಯಮಂತ್ರಿಗಳಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಅವರು ಸೋಮವಾರ ಪ್ರಧಾನಿಯನ್ನು ಭೇಟಿಯಾಗಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!