ಹೊಸದಿಗಂತ ಡಿಜಿಟ್ ಡೆಸ್ಕ್:
ಜನಸಂಖ್ಯೆ ನಿಯಂತ್ರಣದಲ್ಲಿ ಮಹಿಳಾ ಶಿಕ್ಷಣದ ಪಾತ್ರದ ಕುರಿತಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಕ್ಷಮೆಯಾಚಿಸಿದ್ದಾರೆ.
ಮಂಗಳವಾರ ಮಧ್ಯಾಹ್ನ ವಿಧಾನಸಭೆಯಲ್ಲಿ ಮಾತನಾಡುವ ವೇಳೆ ರಾಜ್ಯದಲ್ಲಿ ಸಂತಾನೋತ್ಪತ್ತಿ ಪ್ರಮಾಣ ಕುಸಿದಿದೆ. ಜನಸಂಖ್ಯಾ ಬೆಳವಣಿಗೆ ಬಗ್ಗೆ ತಿಳಿಯಲು ಹೆಣ್ಣುಮಕ್ಕಳಿಗೆ ಶಿಕ್ಷಣದ ಅಗತ್ಯವಿದ್ದು, ಮಹಿಳೆಯರು ಶಿಕ್ಷಣ ಹೊಂದಿರುವುದು ಮುಖ್ಯ ಪಾತ್ರ ವಹಿಸುತ್ತದೆ ಎಂದಿದ್ದರು.
ಈ ಹೇಳಿಕೆ ಕುರಿತಾಗಿ ಎಲ್ಲೆಡೆ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾನು ಕ್ಷಮೆ ಕೇಳುತ್ತೇನೆ. ಮಾತುಗಳನ್ನು ವಾಪಸ್ ಪಡೆಯುತ್ತೇನೆ. ನನ್ನ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ’ ಎಂದು ಹೇಳಿದರು.
#WATCH | Bihar CM Nitish Kumar says, “I apologise & I take back my words…” pic.twitter.com/wRIB1KAI8O
— ANI (@ANI) November 8, 2023